ಸರಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ ಆರು ದಿನ ಮೊಟ್ಟೆ, ಬಾಳೆಹಣ್ಣು ವಿತರಣೆ..

Picture of Savistara

Savistara

Bureau Report

ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ ಅಥವಾ ಬಾಳೆಹಣ್ಣನ್ನು ವಾರದಲ್ಲಿ ಆರು ದಿನ ನೀಡುವುದಾಗಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಮಾಹಿತಿ ನೀಡಿದ ಇಲಾಖೆ, ಅಜೀಮ್ ಪ್ರೇಮ್‌ಜಿ ಫೌಂಡೇಶನ್ ಸಹಯೋಗದೊಂದಿಗೆ 1,500 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ವಾರದಲ್ಲಿ ಆರು ದಿನಗಳ ಕಾಲ ಮೊಟ್ಟೆ ಅಥವಾ ಬಾಳೆಹಣ್ಣು ನೀಡಲಾಗುತ್ತದೆ ಎಂದು ತಿಳಿಸಿದೆ.

ಇದರ ಜೊತೆಗೆ, ಶಾಲಾ ಮುಖ್ಯಸ್ಥರು ಪ್ರತಿ ವಾರ ಕನಿಷ್ಠ ಹತ್ತು ಪೋಷಕರನ್ನು ಶಾಲಾ ಮಕ್ಕಳೊಂದಿಗೆ ಮಧ್ಯಾಹ್ನದ ಬಿಸಿಯೂಟವನ್ನು ಸೇವಿಸಲು ಆಹ್ವಾನಿಸಬೇಕು. ಶಾಲಾ ಶಿಕ್ಷಣ ಆಯುಕ್ತರು ಇದನ್ನು ತಕ್ಷಣವೇ ಜಾರಿಗೆ ತರುವಂತೆ ಖಚಿತಪಡಿಸಿಕೊಳ್ಳಬೇಕು ಎಂದು ಆದೇಶದಲ್ಲಿ ಉಲ್ಲೇಖಸಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!