ತಡರಾತ್ರಿ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಪದಗ್ರಹಣ

Picture of Savistara

Savistara

Bureau Report

ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಹಿನ್ನಲೆಯಲ್ಲಿ ಬಿ.ದಯಾನಂದ ಅವರು ಅಮಾನತುಗೊಂಡಿರುವ ಕಾರಣ ಬ್ಯಾಟನ್ ಹಸ್ತಾಂತರ ಮಾಡಿಲ್ಲ. ಬದಲಾಗಿ ಸೀಮಂತ್ ಕುಮಾರ್ ಅವರು ಕಡತಗಳಿಗೆ ಸಹಿ ಹಾಕಿ ಪ್ರಕ್ರಿಯೆ ಪೂರೈಸಿದರು.

ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಸಂಚಾರ ವಿಭಾಗದ ಜಂಟಿ ಪೊಲೀಸ್ ಕಮಿಷನ‌ರ್ ಎಂ.ಎನ್.ಅನುಚೇತ್ ಸೇರಿದಂತೆ ಹಿರಿಯ ಅಧಿಕಾರಿಗಳು ನೂತನ ಆಯುಕ್ತರನ್ನು ಸ್ವಾಗತಿಸಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಸೀಮಂತ್ ಕುಮಾರ್ ಸಿಂಗ್, ‘ಮುಖ್ಯಮಂತ್ರಿ ಹಾಗೂ ಗೃಹ ಸಚಿವರ ಆದೇಶದ ಮೇಲೆ ಕಠಿಣ ಪರಿಸ್ಥಿತಿಯಲ್ಲೂ ಅಧಿಕಾರ ಸ್ವೀಕರಿಸಿದ್ದೇನೆ. ಹಿಂದಿನ ಆಯುಕ್ತರೂ ಉತ್ತಮ ಕೆಲಸ ಮಾಡಿದ್ದು, ಅದನ್ನು ಮುಂದುವರೆಸಿಕೊಂಡು ಹೋಗುತ್ತೇನೆ’ ಎಂದು ಹೇಳಿದರು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!