ಪರಿಸ್ಥಿತಿ ಪರಾಮರ್ಶಿಸಲು ನಾಳೆ ಮಂಗಳೂರಿಗೆ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಿಯೋಗ ಭೇಟಿ

Picture of Savistara

Savistara

Bureau Report

ಅನೇಕ ದಿನಗಳಿಂದ ಕರಾವಳಿ ಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಪರಾಮರ್ಶಿಸಲು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದ ನಿಯೋಗವು ಜೂ.9ರಂದು ಜಿಲ್ಲೆಗೆ ಭೇಟಿ ನೀಡಲಿದೆ.

ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ವಿಧಾನ ಸಭೆಯ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ, ಶಾಸಕ ವಿ.ಸುನಿಲ್ ಕುಮಾರ್, ವಿಧಾನ ಪರಿಷತ್‌ನ ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾ‌ರ್,
ಈ ನಿಯೋಗದಲ್ಲಿ ಇರಲಿದ್ದಾರೆ.

ಜಿಲ್ಲೆಯಲ್ಲಿ ಉದ್ವಿಗ್ನ ವಾತಾವರಣ, ಸರ್ಕಾರದ ಒತ್ತಡಕ್ಕೆ ಮಣಿದು ಪೊಲೀಸ್ ಇಲಾಖೆ ತೋರುತ್ತಿರುವ ಇಬ್ಬಗೆ ನೀತಿ, ಮುಸ್ಲಿಂ ಮುಖಂಡರ ರಾಜೀನಾಮೆ ನಾಟಕಕ್ಕೆ ಬೆದರಿ, ಅಲ್ಪಸಂಖ್ಯಾತರ ಓಲೈಕೆಗಾಗಿ ಹಿಂದೂ ಮುಖಂಡರ ಮೇಲೆ ಎಫ್.ಐ.ಆರ್ ದಾಖಲು, ರಾತ್ರಿ ಹೊತ್ತಲ್ಲಿ ಪೊಲೀಸರು ಮನೆಗೆ ನುಗ್ಗಿ ತನಿಖೆ ನೆಪದಲ್ಲಿ ಹಿಂದೂ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿರುವುದು, ಆರ್‌ಎಸ್‌ಎಸ್ ಪ್ರಮುಖರ ಮನೆಗೆ ಪ್ರವೇಶಿಸಿ ಫೊಟೋ ತೆಗೆಸುವ ಮೂಲಕ ಮಾನಸಿಕ ಹಿಂಸೆ ನೀಡುವ ಘಟನೆಗಳು ನಡೆಯುತ್ತಿವೆ.ಇವುಗಳ ಪರಿಶೀಲನೆ ನಡೆಸಲು ನಿಯೋಗ ಭೇಟಿ ನೀಡಲಿದೆ ಎಂದು ಬಿಜೆಪಿ ದ.ಕ.ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ.

[t4b-ticker]
error: Content is protected !!