ಸುಹಾಸ್ ಶೆಟ್ಟಿ ಪ್ರಕರಣ ತನಿಖೆ ಎನ್ ಐಎ ಗೆ

Picture of Savistara

Savistara

Bureau Report

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ ಎನ್‌ಐಎಗೆ
ಹಿಂದೂಪರ ಸಂಘಟನೆಗಳ ಕಾರ್ಯಕರ್ತ ಮಂಗಳೂರಿನ ಸುಹಾಸ್ ಶೆಟ್ಟಿ ಹತ್ಯೆ ಪ್ರಕಣವನ್ನು ಕೇಂದ್ರ ಗೃಹ ಇಲಾಖೆ ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ಒಪ್ಪಿಸಿದೆ.ಈ ಕುರಿತು ಇಂದು ಕೇಂದ್ರ ಗೃಹ ಇಲಾಖೆ ಆದೇಶ ಮಾಡಿದೆ ಎಂದು ಸುದ್ದಿಸಂಸ್ಥೆ ಎಎನ್‌ಐ ಎಕ್ಸ್ ಪೋಸ್ಟ್ ಮಾಡಿದೆ.

ಹಿಂದುತ್ವಪರ ಕಾರ್ಯಕರ್ತ, ರೌಡಿ ಶೀಟರ್ ಸುಹಾಸ್‌ ಶೆಟ್ಟಿಯನ್ನು ದುಷ್ಕರ್ಮಿಗಳ ತಂಡವು ಬಜಪೆಯ ಕಿನ್ನಿಪದವಿನಲ್ಲಿ ಮೇ 1ರಂದು ತಲವಾರಿನಿಂದ ಕೊಚ್ಚಿ ಹತ್ಯೆ ಮಾಡಿತ್ತು.

ಮಂಗಳೂರು ಪೊಲೀಸ್‌ನ ಸಿಸಿಬಿ ಘಟಕ ಈ ಪ್ರಕರಣದ ತನಿಖೆ ನಡೆಸುತ್ತಿತ್ತು. ಸಿಸಿಬಿ ಈ ಪ್ರಕರಣದಲ್ಲಿ ಒಟ್ಟು 12 ಆರೋಪಿಗಳನ್ನು ಬಂಧಿಸಿತ್ತು. ರಾಜ್ಯ ಬಿಜೆಪಿ ಮುಖಂಡರು, ಸಂಸದ ಕ್ಯಾ ಬ್ರಿಜೇಶ್ ಚೌಟ,ಶಾಸಕರು ಎನ್ ಐಎ ಗೆ ಒಪ್ಪಿಸುವಂತೆ ಈ ಹಿಂದೆ ಒತ್ತಾಯಿಸಿದ್ದರು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!