ವಿಧಾನ ಪರಿಷತ್ ನಾಮನಿರ್ದೇಶನ ಹೈಕಮಾಂಡ್ ತಡೆ

Picture of Savistara

Savistara

Bureau Report

ಬೆಂಗಳೂರು : ವಿಧಾನ ಪರಿಷತ್ತಿನ ಖಾಲಿ ಇರುವ ನಾಲ್ಕು

ಸ್ಥಾನಗಳಿಗೆ ನಾಮನಿರ್ದೇಶನಕ್ಕೆ ಶಿಫಾರಸು ಮಾಡಿದ್ದ ನಾಲ್ಕು ಹೆಸರುಗಳಿಗೆ ಕಾಂಗ್ರೆಸ್ ಹೈಕಮಾಂಡ್ ಕೊನೆಯ ಕ್ಷಣದಲ್ಲಿ ತಾತ್ಕಾಲಿಕ ತಡೆ ಹಾಕಿದೆ ಎಂದು ತಿಳಿದು ಬಂದಿದೆ.

ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು, ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು, ದಲಿತ ಮುಖಂಡ ಡಿ.ಜಿ.ಸಾಗರ್ ಹಾಗೂ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಆರತಿ ಕೃಷ್ಣ ಅವರನ್ನು ಪರಿಷತ್ತಿಗೆ ನಾಮನಿರ್ದೇಶನ ಮಾಡಲು ಪಕ್ಷದ ಹೈಕಮಾಂಡ್ ಶಿಫಾರಸು ಮಾಡಿದೆ

ಆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಲ್ವರ ಹೆಸರಿದ್ದ ಶಿಫಾರಸು ಪತ್ರಕ್ಕೆ ಸಹಿ ಹಾಕಿದ್ದರು. ಅಲ್ಲದೆ, ರಾಜ್ಯಪಾಲರಿಗೆ ಪಟ್ಟಿಯನ್ನು ರವಾನಿಸಿದ್ದರು ಎನ್ನಲಾಗಿತ್ತು. ಆದರೆ, ಕೊನೆಯ ಗಳಿಗೆಯಲ್ಲಿ ಎಐಸಿಸಿ, ನಾಲ್ಕು ಸ್ಥಾನಗಳ ನಾಮನಿರ್ದೇಶನವನ್ನು ತಡೆ ಹಿಡಿಯುವಂತೆ ಸೂಚಿಸಿದೆ ಎಂದು ತಿಳಿದುಬಂದಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!