ಇಂತಹ ಘಟನೆ ಮರುಕುಳಿಸಿದರೆ ಹೋರಾಟ ನಿಶ್ಚಿತ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬಿವೈ ವಿಜೇಯೇಂದ್ರ

Picture of Savistara

Savistara

Bureau Report

ಪೊಲೀಸ್ ವ್ಯವಸ್ಥೆ ದುರ್ಬಳಕೆ ಮಾಡಿಕೊಂಡು ಹಿಂದೂ ಕಾರ್ಯಕರ್ತರಿಗೆ ಕಾಂಗ್ರೆಸ್ ಸರ್ಕಾರ ಕಿರುಕುಳ ನೀಡುತ್ತಿದೆಯೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿಕೆಯಲ್ಲಿ ತಿಳಿಸಿದ್ದಾರೆ .

ಓಲೈಕೆ ರಾಜಕಾರಣಕ್ಕಾಗಿ ಸಮಾಜಘಾತಕ ಹಾಗೂ ದೇಶವಿದ್ರೋಹಿ ದುಷ್ಟ ಶಕ್ತಿಗಳ ರಕ್ಷಣೆಗೆ ನಿಂತಿರುವ ಕಾಂಗ್ರೆಸ್ ಪಕ್ಷ ಸರ್ಕಾರದಿಂದಾಗುತ್ತಿರುವ ಹಿಂದೂ ಕಾರ್ಯಕರ್ತರ ಬಂಧನ, ಸುಳ್ಳು ಪ್ರಕರಣ ದಾಖಲು ಮತ್ತು ಗಡಿಪಾರು ಆದೇಶ ಹಿನ್ನೆಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಪಕ್ಷದ ನಿಯೋಗದೊಂದಿಗೆ ತೆರಳಿ ಮಾಹಿತಿ ಸಂಗ್ರಹ ಸಭೆ ನಡೆಸಿದ್ದು

ಕಾಂಗ್ರೆಸ್ ಸರ್ಕಾರದ ಪ್ರಭಾವಿಗಳ ತಾಳಕ್ಕೆ ತಕ್ಕಂತೆ ಪೊಲೀಸರು ಕುಣಿದರೆ, ಅದರ ಪ್ರತಿಫಲವನ್ನು ಅನುಭವಿಸಬೇಕಾಗುತ್ತದೆ. ಈಗಾಗಲೇ ಬೆಂಗಳೂರಿನ ದುರ್ಘಟನೆ ಪೊಲೀಸರಿಗೆ ಎಚ್ಚರಿಕೆಯ ಗಂಟೆಯಾಗಿದೆ ಎಂಬುದನ್ನು ತಿಳಿಸಲಾಯಿತು. ನ್ಯಾಯೋಚಿತವಾಗಿ ಕಾನೂನು ಸುವ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಿ, ನಮ್ಮ ಕಾರ್ಯಕರ್ತರ ನೈತಿಕ ಬಲ ಕುಗ್ಗಿಸಲು ಯತ್ನಿಸಿದರೆ ಪರಿಣಾಮ ಎದುರಿಸಲು ಸರ್ಕಾರ ಸಿದ್ಧವಾಗಲಿ. ಕರಾವಳಿಯಲ್ಲಿ ಶಾಂತಿ ಸುವ್ಯವಸ್ಥೆ ನೆಲೆಸಬೇಕು, ದೇಶವಿದ್ರೋಹಿ ಶಕ್ತಿಗಳ ಕೋಮು ಅಟ್ಟಹಾಸ ನಿಲ್ಲಬೇಕು ಎಂಬುದು ನನ್ನ ಒತ್ತಾಯವಾಗಿದೆ. ಈ ನಿಟ್ಟಿನಲ್ಲಿ ದುಷ್ಟ ಜನರ ರಕ್ಷಣೆ, ಶಿಷ್ಟರನ್ನು ಕೆರಳಿಸಿದರೆ ಅದರ ವಿರುದ್ಧ ಬಿಜೆಪಿ ದೊಡ್ಡ ಪ್ರಮಾಣದಲ್ಲಿ ಹೋರಾಡಲಿದೆ ಎಂದು ಎಚ್ಚರಿಕೆ ನೀಡಿದರು.ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಗೆ ಪಕ್ಷದ ಪ್ರಮುಖರೊಂದಿಗೆ ತೆರಳಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಆಯುಕ್ತರು ಸೇರಿದಂತೆ ಇತರ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!