ಒಂದು ದೇಶ,ಒಂದು ಚುನಾವಣೆ ಜನರ ಸಹಭಾಗಿತ್ವ ಮುಖ್ಯ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್

Picture of Savistara

Savistara

Bureau Report

ಬೆಂಗಳೂರು: ‘ದೇಶದಲ್ಲಿ ಒಂದಿ ಲ್ಲೊಂದು ಚುನಾವಣೆ ನಡೆಯುತ್ತಲೇ ಇರುತ್ತದೆ. ವರ್ಷವೊಂದರಲ್ಲಿ 6 ತಿಂಗಳು ಆಡಳಿತಾತ್ಮಕ ಕೆಲಸ ಗಳು ನಡೆಯುವುದೇ ಇಲ್ಲ.

ಒಂದು ದೇಶ, ಒಂದು ಚುನಾವಣೆಯೇ ಇದಕ್ಕೆ ಪರಿಹಾರ. ಇದನ್ನು ಎಲ್ಲರೂ ಬೆಂಬಲಿಸಬೇಕು. ಇದಕ್ಕಾಗಿ ಸಾರ್ವಜನಿಕರೇ ಅಭಿಯಾನ ನಡೆಸಬೇಕು’ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್‌ ಪ್ರತಿಪಾದಿಸಿದರು.
“ಒಂದು ದೇಶ, ಒಂದು ಚುನಾವಣೆ’ ಕುರಿತು ಸಾಮಾಜಿಕ ಜಾಲತಾಣಗಳ ಇನ್‌ಫ್ಲುಯೆನ್ಸರ್‌ಗಳ ಜತೆಗೆ ನಗರದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಸಂವಾದದಲ್ಲಿ ಮಾತನಾಡಿದ ಅವರು, ‘ಸದಾ ಕಾಲ ಚುನಾವಣೆ ನಡೆಯುವುದ ರಿಂದ ಏನೆಲ್ಲಾ ಸಮಸ್ಯೆ ಆಗುತ್ತದೆ ಎಂಬುದರ ಬಗ್ಗೆ ನನ್ನ ಅನುಭವವನ್ನೇ ನಿಮ್ಮ ಮುಂದೆ ಇರಿಸುತ್ತೇನೆ’ ಎಂದರು.

*2023ರಲ್ಲಿ ನಾನು ಮಧ್ಯ ಪ್ರದೇಶದ ಮುಖ್ಯಮಂತ್ರಿ ಆಗಿದ್ದೆ. ಅದೇ ವರ್ಷದ ಸೆಪ್ಟೆಂಬರ್‌ನಿಂದಲೇ ಮಧ್ಯ ಪ್ರದೇಶ ವಿಧಾನಸಭೆಯ ಚುನಾವಣಾ ಪ್ರಕ್ರಿಯೆಗಳು ಆರಂಭವಾದವು. ಆ 4 ತಿಂಗಳು ಯಾವುದೇ ಕೆಲಸ ಮಾಡಲು ಸಾಧ್ಯವಾಗಲಿಲ್ಲ. ಚುನಾವಣೆ ಮುಗಿದು, ಹೊಸ ಸರ್ಕಾರ ಬಂದ ಎರಡೇ ತಿಂಗಳಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾಯಿತು’ ಎಂದರು.

‘ಲೋಕಸಭಾ ಚುನಾವಣೆ ಮುಗಿದು, ಮೋದಿ ಅವರು ಮತ್ತೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದರು. ನಾನೂ ಕೃಷಿ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದೆ. ಸಚಿವಾಲಯದ ಕೆಲಸಗಳನ್ನು ಅರ್ಥ ಮಾಡಿಕೊಳ್ಳುವ ವೇಳೆಗೆ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ವೀಕ್ಷಕರಾಗಿ ಹೋಗುವಂತೆ ಸೂಚಿಸಿದರು. ಒಂದಿಡೀ ವರ್ಷ ಕೆಲಸ ಮಾಡಲು ಆಗಲಿಲ್ಲ. ಅದೇ ಸಂದರ್ಭದಲ್ಲಿ ಸರ್ಕಾರವೂ ಕೆಲಸ ಮಾಡಲಾಗಲಿಲ್ಲ’ ಎಂದರು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!