ಅಮಾನತು ಪ್ರಶ್ನಿಸಿ ಸಿಎಟಿ ಕದ ತಟ್ಟಿದ ಐಪಿಯಸ್ ಅಧಿಕಾರಿ ವಿಕಾಸ್ ಕುಮಾರ್

Picture of Savistara

Savistara

Bureau Report

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ

ಕಾಲ್ತುಳಿತ ದುರಂತ ಹಿನ್ನೆಲೆಯಲ್ಲಿ ಅಮಾನತುಗೊಂಡಿರುವ ನಗರ ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತರಾಗಿದ್ದ ವಿಕಾಸ್ ಕುಮಾರ್ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ಮೊರೆ ಹೋಗಿದ್ದಾರೆ.

ಸರ್ಕಾರದ ಅಮಾನತು ಆದೇಶ ಪ್ರಶ್ನಿಸಿ ಹಿರಿಯ ಅಧಿಕಾರಿ ವಿಕಾಸ್‌ ಅವರು ಆನ್‌ಲೈನ್ ಮೂಲಕ ಅರ್ಜಿ ಹಾಕಿದ್ದಾರೆ. ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿಯನ್ನು ಪ್ರತಿವಾದಿಗಳನ್ನಾಗಿ ಮಾಡಿದ್ದಾರೆ. ಸದ್ಯ ಅರ್ಜಿ ಸಲ್ಲಿಕೆಯಾಗಿದ್ದು, ಸಿಎಟಿ ವಿಚಾರಣೆ ಇನ್ನಷ್ಟೇ ಕೈಗೆತ್ತಿಕೊಳ್ಳಬೇಕಿದೆ.

ಆರ್‌ಸಿಬಿ ವಿಜಯೋತ್ಸವ ಹಿನ್ನೆಲೆಯಲ್ಲಿ ಜೂ. 4ರಂದು ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಲಕ್ಷಾಂತರ ಅಭಿಮಾನಿಗಳು ಜಮಾವಣೆಗೊಂಡಿದ್ದರು. ಸ್ಟೇಡಿಯಂ ಪ್ರವೇಶಿಸುವಾಗ ಉಂಟಾದ ನೂಕುನುಗ್ಗಲಿನಿಂದ ಉಂಟಾದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದರು. ಅಲ್ಲದೇ, 50ಕ್ಕಿಂತ ಹೆಚ್ಚು ಮಂದಿ ಗಾಯಗೊಂಡಿದ್ದರು. ದುರಂತ ಹಿನ್ನೆಲೆಯಲ್ಲಿ ಪೊಲೀಸ್‌ ಆಯುಕ್ತರಾಗಿದ್ದ ದಯಾನಂದ್‌, ಐಜಿ ವಿಕಾಸ್ ಕುಮಾರ್, ಕೇಂದ್ರ ವಿಭಾಗದ ಡಿಸಿಪಿ ಶೇಖ‌ರ್ ಟೆಕ್ಕಣ್ಣನವ‌ರ್, ಎಸಿಪಿ ಬಾಲಕೃಷ್ಣ ಹಾಗೂ ಇನ್‌ಸ್ಪೆಕ್ಟರ್ ಗಿರೀಶ್ ಅವರನ್ನ ಸರ್ಕಾರ ಸಸ್ಪೆಂಡ್ ಮಾಡಿತ್ತು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!