ಉಗ್ರರ ವಿರುದ್ಧ ಕ್ರಮಕೈಗೊಳ್ಳುವರೆಗೆ ಸಿಂಧೂ ಜಲ ಒಪ್ಪಂದ ಬಗ್ಗೆ ಮಾತುಕತೆಯಿಲ್ಲ ಭಾರತ ಸ್ಪಷ್ಟನೆ

Picture of Savistara

Savistara

Bureau Report

ವಿಶ್ವಬ್ಯಾಂಕ್‌ನ ಮಧ್ಯಸ್ಥಿಕೆಯಲ್ಲಿ 1960ರಿಂದ ಭಾರತ ಮತ್ತು ಪಾಕಿಸ್ತಾನದ ನಡುವೆ ಸಿಂಧೂ ನದಿ ಮತ್ತು ಅದರ ಉಪನದಿಗಳ ನೀರಿನ ವಿತರಣೆ ಹಾಗೂ ಬಳಕೆಯನ್ನು ಐಡಬ್ಲ್ಯೂಟಿ ಮೂಲಕ ನಿಯಂತ್ರಿಸಲಾಗುತ್ತಿದೆ. ಐಡಬ್ಲ್ಯೂಟಿಯನ್ನು ಸ್ಥಗಿತಗೊಳಿಸಿರುವ ನಿರ್ಧಾರವನ್ನು ಭಾರತ ಮರುಪರಿಶೀಲಿಸುವಂತೆ ಪಾಕಿಸ್ತಾನದ ಜಲಸಂಪನ್ಮೂಲ ಕಾರ್ಯದರ್ಶಿ ಸೈಯದ್‌ ಅಲಿ ಮುರ್ತಾಜಾ ಅವರು ಹಲವು ಬಾರಿ ಒತ್ತಾಯಿಸಿದ್ದಾರೆ. ಭಾರತೀಯ ಜಲಸಂಪನ್ಮೂಲ ಕಾರ್ಯದರ್ಶಿ ದೇಬಶ್ರೀ ಮುಖರ್ಜಿ ಅವರಿಗೆ ಬರೆದ ಹಲವು ಪತ್ರಗಳಲ್ಲಿ ಭಾರತ ಎತ್ತಿರುವ ನಿರ್ದಿಷ್ಟ ಆಕ್ಷೇಪಣೆಗಳನ್ನು ಚರ್ಚಿಸಲು ತಮ್ಮ ಸರ್ಕಾರ ಸಿದ್ಧವಾಗಿದೆ ಎಂದು ಮುರ್ತಾಜಾ ಹಲವು ಬಾರಿ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಭಾರತವು ಪಾಕಿಸ್ತಾನದ ಯಾವುದೇ ಪತ್ರಗಳಿಗೆ ಪ್ರತಿಕ್ರಿಯಿಸಿಲ್ಲ. ಭಯೋತ್ಪಾದನೆಗೆ ಸಂಬಂಧಿಸಿದಂತೆ ಭಾರತದ ಕಳವಳಗಳನ್ನು ಪರಿಹರಿಸುವವರೆಗೆ ನೆರೆಯ ದೇಶದೊಂದಿಗೆ ಯಾವುದೇ ಮಾತುಕತೆ ನಡೆಸುವುದಿಲ್ಲ ಎಂದು ಮೂಲಗಳು ತಿಳಿಸಿವೆ.

26 ಜನರು ಹತ್ಯೆಯಾದ ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ 1960ರ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸಿತ್ತು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!