ಗುಜರಾತ್ ವಿಮಾನ ದುರಂತ:ವೈದ್ಯಕಿಯ ಕಾಲೇಜ್ ಗೆ ನುಗ್ಗಿದ ವಿಮಾನ 5 ವಿದ್ಯಾರ್ಥಿಗಳ ಸಾವು

Picture of Savistara

Savistara

Bureau Report

ದುರಂತಕ್ಕೀಡಾಗುವ ಮುನ್ನ ವಿಮಾನ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳು ಉಳಿದಿದ್ದ ಹಾಸ್ಟೆಲ್‌ಗೆ ನುಗ್ಗಿದ ಪರಿಣಾಮ ಊಟಕ್ಕೆ ಕುಳಿತ್ತಿದ್ದ ವಿದ್ಯಾರ್ಥಿಗಳ ಪೈಕಿ ಐವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ಭೀಕರತೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ.

230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ ಒಟ್ಟು 242 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ಗ್ರೀಮ್‌ಲೈನರ್ Al-171 ವಿಮಾನ ಕಟ್ಟಡಕ್ಕೆ ಡಿಕ್ಕಿ ಹೊಡೆದ ಕೆಲವೇ ನಿಮಿಷಗಳಲ್ಲಿ ಬೆಂಕಿಗೆ ಆಹುತಿಯಾಗಿರುವುದು ದೃಶ್ಯಗಳಲ್ಲಿ ಸೆರೆಯಾಗಿದೆ. ಡಿಜಿಸಿಎ ಪ್ರಕಾರ, ಬೋಯಿಂಗ್ 787 ವಿಮಾನವು ರನ್‌ವೇ 23ರಿಂದ ಮಧ್ಯಾಹ್ನ 1.39ಕ್ಕೆ ಹೊರಟಿತು ಎಂದು ದೃಢಪಡಿಸಲಾಗಿದೆ. ಹೊರಟ ಕೆಲವೇ ಕ್ಷಣಗಳಲ್ಲಿ ‘ಮೇಡೇ’ ಸಂದೇಶ ಹೊರಬಿದ್ದಿದೆ. ಇದಾದ ಬೆನ್ನಲ್ಲೇ ವಿಮಾನ ವಾಯು ಸಂಚಾರ ನಿಯಂತ್ರಣದ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ವರದಿಗಳು ಉಲ್ಲೇಖಿಸಿವೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!