ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬೆಳ್ಳಿರಥ ನಿರ್ಮಾಣ ಡಾ. ರೇಣುಕಾಪ್ರಸಾದ್ ಕುಟುಂಬದವರಿಂದ ವೀಳ್ಯ ನೀಡಿಕೆ

Picture of Savistara

Savistara

Bureau Report

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಡಾ. ಕೆ.ವಿ ರೇಣುಕಾಪ್ರಸಾದ್ ಮತ್ತು ಕುಟುಂಬದವರು ಬೆಳ್ಳಿ ರಥ
ನೀಡಲಿದ್ದು ಅದರ ಪೂರ್ವಭಾವಿಯಾಗಿ ರಥ ನಿರ್ಮಾಣಕ್ಕೆ ವೀಳ್ಯ ನೀಡುವ ಕಾರ್ಯಕ್ರಮ ಜೂ.14 ರಂದು ನಡೆಯಿತು.

ಇಂದು (ಜೂ.14 ) ರಂಸು ದೇವಾಲಯದಲ್ಲಿ ಶಾಸ್ತ್ರೋಕ್ತ ವಿಧಿಯಲ್ಲಿ ವಿಶೇಷ ಪೂಜೆ ನೆರವೇರಿಸಿ ಪ್ರಾರ್ಥನೆ ಮಾಡಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಮತ್ತು ವ್ಯವಸ್ಥಾಪನಾ ಸಮಿತಿ ಸದಸ್ಯರಿದ್ದು, ಕಾರ್ಯನಿರ್ವಾಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಮತ್ತಿತರರು ಅನುಮತಿ ಪತ್ರವನ್ನು ಹಸ್ತಾಂತರಿಸಿದರು. ನಂತರ ವೀಳ್ಯ ನೀಡಿಕೆ ನಡೆಯಿತು.

ಈ ಸಂದರ್ಭದಲ್ಲಿ ಭರತ್ ಮುಂಡೋಡಿ, ನಿತ್ಯಾನಂದ ಮುಂಡೋಡಿ, ಮೋಹನ್ ರಾಮ್ ಸುಳ್ಳಿ, ರಥಶಿಲ್ಪಿ ರಾಜಗೋಪಾಲ್ ಆಚಾರ್ , ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಮಾಸ್ಟರ್ ಪ್ಲಾನ್ ಸದಸ್ಯರು, ಸ್ಥಳೀಯ ಮುಖಂಡರು ಭಾಗವಹಿಸಿದ್ದಾರೆ.
ನಂತರ ರಥ ನಿರ್ಮಾಣಕ್ಕೆ ಸಾಂಕೇತಿಕವಾಗಿ ಬೆಳ್ಳಿ ಮತ್ತು, ಮರ ಹಸ್ತಾಂತರ ನಡೆಯಿತು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!