ಏರ್ ಇಂಡಿಯಾ ವಿಮಾನ ದುರಂತ:ಮರಳು ಕಲಾಕೃತಿ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದ ಕಲಾವಿದ

Picture of Savistara

Savistara

Bureau Report

ಖ್ಯಾತ ಮರಳು ಕಲಾವಿದ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸುದರ್ಶನ್ ಪಟ್ನಾಯಕ್ ಅವರು ಒಡಿಶಾದ ಪುರಿಯ ಸಮುದ್ರ ತೀರದಲ್ಲಿ ಕಲಾಕೃತಿಯನ್ನು ರಚಿಸುವ ಮೂಲಕ ವಿಮಾನ ದುರಂತದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಇದರ ವಿಡಿಯೊ ಮತ್ತು ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

‘ದುರದೃಷ್ಟಕರ ಘಟನೆಯಲ್ಲಿ ಅನೇಕರು ಪ್ರಾಣ ಕಳೆದುಕೊಂಡಿದ್ದರಿಂದ ಇಡೀ ಜಗತ್ತು ತೀವ್ರ ಆಘಾತದಲ್ಲಿದೆ.

ವಿಮಾನದಲ್ಲಿದ್ದ ಪ್ರಯಾಣಿಕರ ಜತೆಗೆ ಎಂಬಿಬಿಎಸ್ ವಿದ್ಯಾರ್ಥಿಗಳು ಸೇರಿದಂತೆ ಹಲವರು ಮೃತಪಟ್ಟಿರುವುದು ತುಂಬಾ ನೋವಿನ ಸಂಗತಿ. ಭಾರತದಲ್ಲಿ ಮಾತ್ರವಲ್ಲದೆ ಜಗತ್ತಿನ ಎಲ್ಲಿಯೂ ಇಂತಹ ದುರಂತ ಮತ್ತೆಂದೂ ಸಂಭವಿಸದಿರಲಿ ಎಂದು ಜಗನ್ನಾಥನಲ್ಲಿ ಪ್ರಾರ್ಥಿಸುವುದಷ್ಟೇ ನಾನು ಮಾಡಬಲ್ಲೆ’ ಎಂದು ಸುದರ್ಶನ್ ಪಟ್ನಾಯಕ್ ಹೇಳಿದ್ದಾರೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!