ಉಡುಪಿ,ಉತ್ತರಕನ್ನಡ, ಕೊಡಗು,ದಕ್ಷಿಣಕನ್ನಡ ಕ್ಕೆ ರೆಡ್ ಅಲರ್ಟ್

Picture of Savistara

Savistara

Bureau Report

ಬೆಂಗಳೂರು: ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ,

ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಕಡೆ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಇದೇ ಮಂಗಳವಾರ(ಜೂ. 17ರಂದು) ರೆಡ್ ಅಲರ್ಟ್ ಘೋಷಿಸಲಾಗಿದೆ.

ಈಗಿರುವ ಹವಾಮಾನದ ವೈಶಿಷ್ಟ್ಯ ಗಮನಿಸಿದರೆ, ಪೂರ್ವ ಅರಬ್ಬಿ ಸಮುದ್ರದ ಕೊಂಕಣದ ಕರಾವಳಿ ಹತ್ತಿರ ಸರ್ಕ್ಯುಲೇಶನ್ 7.6 ಕಿ.ಮೀ ಎತ್ತರದವರೆಗೆ ಇದೆ. ಇದರ ಪ್ರಭಾವದಿಂದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 16 ರಿಂದ 20ರ ವರೆಗೆ ವ್ಯಾಪಕವಾಗಿ ಮಳೆಯಾದರೆ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆ ಮಳೆಯಾಗಲಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಕಡೆ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ಜೂನ್ 17ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ ಹಾಗೂ ಹಾಸನ ಜಿಲ್ಲೆಗಳಿಗೆ ಜೂನ್ 17ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜೂನ್ 18 ರಿಂದ ಕರ್ನಾಟಕ ರಾಜ್ಯಾದ್ಯಂತ ಮಳೆಯ ತೀವ್ರತೆ ಹಾಗೂ ವಿಂಗಡಣೆ ಕಡಿಮೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ.

ಜೂನ್ 17ರಂದು ಬೆಂಗಳೂರಿನ ಕೆಲವು ಕಡೆ ಹಗುರದಿಂದ ಸಾಧಾರಣವಾಗಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!