ಬೆಂಗಳೂರು ಕಾಲ್ತುಳಿತ ಪ್ರಕರಣ:ಮುಖ್ಯಮಂತ್ರಿ ರಾಜೀನಾಮೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

Picture of Savistara

Savistara

Bureau Report

“ಪ್ರತಿಷ್ಠೆಗಾಗಿ RCB ಅಭಿಮಾನಿಗಳನ್ನು ಬಲಿಕೊಟ್ಟ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ”

ಬೆಂಗಳೂರಿನ ಕಾಲ್ತುಳಿತ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯ ಮತ್ತು ಸಿಎಂ, ಡಿಸಿಎಂ, ಗೃಹಸಚಿವರ ರಾಜೀನಾಮೆಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಬಿಜೆಪಿ ಕರ್ನಾಟಕ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.

ಗೆಲುವಿನ ಸಂಭ್ರಮಾಚರಣೆಯಲ್ಲಿ ಲಕ್ಷಾಂತರ ಜನ ಸೇರುತ್ತಾರೆಂಬ ಮಾಹಿತಿ ಇದ್ದರೂ ಒಂದೇ ದಿನದಲ್ಲಿ ಎರಡೆರಡು ಕಾರ್ಯಕ್ರಮ ಆಯೋಜಿಸಿ ಭದ್ರತೆ ನೀಡಲಾಗದೇ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಪ್ರಚಾರದ ಗೀಳಿಗೆ ಅಮಾಯಕರ ಬಲಿ ಪಡೆದ ಸರ್ಕಾರದ ಜನಕಂಠಕ ನಿಲುವನ್ನು ಖಂಡಿಸಿ
ಜೂನ್ 4ನೇ ತಾರೀಕು ರಾಜ್ಯಾದ್ಯಂತ, ದೇಶಾದ್ಯಂತ RCB ಸಂಭ್ರಮಾಚರಣೆ ನಡೆಯುತ್ತಿದ್ದರೆ, ಬೆಂಗಳೂರಿನಲ್ಲಿ ರಾಜ್ಯದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ನಡುವೆ ಪೈಪೋಟಿ ನಡೆಯುತ್ತಿತ್ತು. RCB ಗೆಲುವಿನ ಸಂಭ್ರಮವನ್ನು ನಮ್ಮ ಸರ್ಕಾರದ ಜನಪ್ರಿಯತೆ ಹೆಚ್ಚಿಸಿಕೊಳ್ಳಬೇಕು ಎಂಬ ಪುಕ್ಕಟ್ಟೆ ಪ್ರಚಾರ ಪಡೆದುಕೊಳ್ಳುವ ಹಠ ಹಾಗೂ ಚಟಕ್ಕೆ ಬಿದ್ದು ಉಪಮುಖ್ಯಮಂತ್ರಿಗಳಂತೂ ಏರ್ಪೋರ್ಟ್ ಗೆ ದಾವಿಸಿ ಕ್ರೀಡಾಪಟುಗಳನ್ನು ಸ್ವಾಗತಿಸಿ ಕ್ರೀಡಾಂಗಣದಲ್ಲಿ ಕಪ್ ಎತ್ತಿ ಹಿಡಿದು ತಾವೇ ಗೆದ್ದವರಂತೆ ಬಿಂಬಿಸಿಕೊಂಡರು. ಈ ಕಾರ್ಯಕ್ರಮಕ್ಕೆ ಭದ್ರತೆ ಒದಗಿಸಲು ಸಾಧ್ಯವಿಲ್ಲ ಎಂದು ಪೊಲೀಸ್ ಅಧಿಕಾರಿಗಳು ವರದಿ ಕೊಟ್ಟರೂ ಸಹ ಲೆಕ್ಕಿಸದೇ ಪುಕ್ಕಟ್ಟೆ ಪ್ರಚಾರದ ಗೀಳಿಗೆ ಬಿದ್ದು ಎರಡೂ ಕಡೆ ಕಾರ್ಯಕ್ರಮ ನಡೆಸಿದರ ಪರಿಣಾಮವಾಗಿ 11 ಮುಗ್ಧ ಜೀವಗಳ ಬಲಿ ತೆಗೆದುಕೊಂಡರು. ಈಗಲಾದರೂ ಭಂಡತನ ಬಿಟ್ಟು ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು

ಈ ಸಂದರ್ಭದಲ್ಲಿ ವಿಧಾನಸಭಾ ವಿರೋಧ ಪಕ್ಷ ನಾಯಕರಾದ ಶ್ರೀ ಆರ್ ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಶ್ರೀ ಚಲವಾದಿ ನಾರಾಯಣ ಸ್ವಾಮಿ, ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ ಅಶ್ವಥ್ ನಾರಾಯಣ್, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾದ ರವಿ ಕುಮಾರ್,ವಿಧಾನಸಭಾ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಶ್ರೀ ದೊಡ್ಡನಗೌಡ ಪಾಟೀಲ್, ಸೇರಿದಂತೆ ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

[t4b-ticker]
error: Content is protected !!