

ಮಂಗಳೂರು: ಅಕ್ರಮ ಸಕ್ರಮ ಅರ್ಜಿ ತಿರಸ್ಕಾರ, 9/11 ಸಮಸ್ಯೆ, ವಿದ್ಯುತ್ ಬೆಲೆಯೇರಿಕೆ ಜನವಿರೋಧಿ ನೀತಿಯ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರದ ವೈಫಲ್ಯಗಳ ವಿರುದ್ದ ಜೂ. 23ರಂದು ಬೆಳಗ್ಗೆ 10ಕ್ಕೆ ಏಕಕಾಲದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆಗಳ ಮುಂಭಾಗ ಬಿಜೆಪಿ ವತಿಯಿಂದ ಪ್ರತಿಭಟನೆ ಆಯೋಜಿಸಲಾಗಿದೆಯೆಂದು ಸಂಸದ,ರಾಜ್ಯ ಬಿಜೆಪಿ ಕಾರ್ಯದರ್ಶಿ ಕ್ಯಾ ಬ್ರಿಜೇಶ್ ಚೌಟ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ
ದಕ್ಷಿಣ ಕನ್ನಡ ಜಿಲ್ಲೆಯ 223 ಗ್ರಾಮ ಪಂಚಾಯತ್, ಎರಡು ನಗರಸಭೆ, 3 ಪುರಸಭೆ, 8 ಪಟ್ಟಣ ಪಂಚಾಯತ್ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಮುಂಭಾಗದಲ್ಲಿ ಪ್ರತಿಭಟನೆ ನಡೆಯಲಿದೆ. ಅವಿಭಜಿತ ಜಿಲ್ಲೆಯ ಒಟ್ಟು 399 ಸ್ಥಳಗಳಲ್ಲಿ ಈ ಪ್ರತಿಭಟನೆ ನಡೆಸಲಾಗುವುದು,
ಏಕ ನಿವೇಶನ ಮಂಜೂರಾತಿಗಾಗಿ ಸಲ್ಲಿಸಿದ ಅರ್ಜಿಗಳು ಗ್ರಾಪಂಗಳಲ್ಲಿ ಧೂಳು ಹಿಡಿಯುತ್ತಿವ 94 ಸಿ ವಿಚಾರದಲ್ಲಿ,ಅಕ್ರಮ ಸಕ್ರಮ ಯಾವುದೇ ಕೆಲಸ ಕಾರ್ಯಗಳು ನಡೆಯುತ್ತಿಲ್ಲ ತಕ್ಷಣ ಈ ನಿಯಮ ಸರಳೀಕರಣ ಮಾಡಬೇಕು ಅಕ್ರಮ ಸಕ್ರಮ ಅರ್ಜಿಗಳನ್ನು ಶಾಸಕರು, ಅಕ್ರಮ ಸಕ್ರಮ ಸಮಿತಿ, ಸ್ಥಳೀಯ ಸಂಸ್ಥೆಗಳ ಗಮನಕ್ಕೆ ತಂದು ಬಳಿಕ ವಿಲೇವಾರಿ ಮಾಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತದೆ ಎಂದರು.
ಪ್ರತಿ ಗ್ರಾಮ ಪಂಚಾಯತ್‌ಗೆ ಕನಿಷ್ಠ 100 ಮನೆ ನೀಡಬೇಕು, ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆಗೆ ಆದಾಯ ಮಿತಿ ನಿಗದಿಗೊಳಿಸುವ ಸರಕಾರದ ನಿರ್ಧಾರದಿಂದ ಅನೇಕರು ಯೋಜನೆಯಿಂದ ವಂಚಿತರಾಗಲಿದ್ದಾರೆ. ಭಾಗ್ಯಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವ ಪ್ರಯತ್ನಕ್ಕೆ ಸರ್ಕಾರ ಮುಂದಾಗಿದ್ದು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಮನೆಗಳಿಗೆ ಹಾನಿ ಸಹಿತ ವಿವಿಧ ರೀತಿಯಲ್ಲಿ ನಷ್ಟ ಉಂಟಾಗಿದೆ. ಆದರೆ, ರಾಜ್ಯ ಸರಕಾರ ಇದುವರೆಗೆ ಯಾವುದೇ ಮಳೆಹಾನಿ ಪರಿಹಾರ ನೀಡಿಲ್ಲ. ಮಳೆ ಹಾನಿ ಸಂತ್ರಸ್ತರಿಗೆ ರಾಜ್ಯ ಸರಕಾರ ತಕ್ಷಣ ಪರಿಹಾರ ಒದಗಿಸಬೇಕು, ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ ನೀಡದೆ ಕಡೆಗಣಿಸಿದ್ದು ಉಚಿತ ವಿದ್ಯುತ್ ನೀಡುತ್ತಿದ್ದೇವೆ ಎಂದು ಹೇಳುವ ಸರಕಾರ ಇನ್ನೊಂದೆಡೆ ವಿದ್ಯುತ್ ಬೆಲೆಯೇರಿಕೆ ಮಾಡುತ್ತಿದೆ. ಇಲಾಖೆಯ ನೌಕರರ ಪಿಂಚಣಿಗೂ ವಿದ್ಯುತ್ ಶುಲ್ಕ ಬಳಸಲಾಗುತ್ತಿದೆ. ಈ ಎಲ್ಲದರ ವಿರುದ್ಧ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ಅವರು ಹೇಳಿದರು.
ಬಿಜೆಪಿ ದ.ಕ. ಜಿಲ್ಲಾ ಉಪಾಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು, ಶಾಂತಿಪ್ರಸಾದ್ ಹೆಗ್ಡೆ, ಜಿಲ್ಲಾ ಕಾರ್ಯದರ್ಶಿ ಪೂರ್ಣಿಮಾ ಎಂ., ಕೋಶಾಧಿಕಾರಿ ಸಂಜಯ ಪ್ರಭು, ಜಿಲ್ಲಾ ವಕ್ತಾರ ರಾಜಗೋಪಾಲ ರೈ, ಪ್ರಭಾಕರ ಪ್ರಭು ಉಪಸ್ಥಿತರಿದ್ದರು.













































