ಭಾರತ್ ಮಾತಾ ವಿವಾದ:ರಾಜಭವನ ಅರೆಸೆಸ್ಸ್ ಶಾಖೆಯಲ್ಲ ಸಿಪಿಎಂ ಟೀಕೆ

Picture of Savistara

Savistara

Bureau Report

ತಿರುವನಂತಪುರ: ಸರ್ಕಾರಿ ಕಾರ್ಯಕ್ರಮದಲ್ಲಿ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ರಾಜ್ಯಪಾಲ ರಾಜೇಂದ್ರ ವಿಶ್ವನಾಥ ಅರ್ಲೇಕ‌ರ್ ಅವರ ಒತ್ತಾಯವನ್ನು ಟೀಕಿಸಿರುವ ಸಿಪಿಐ (ಎಂ)ನ ಮುಖವಾಣಿ ದೇಶಾಭಿಮಾನಿ, ‘ರಾಜಭವನವು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಶಾಖೆ ಅಲ್ಲ’ ಎಂದು ಟೀಕಿಸಿದೆ.ಕೇರಳದ ರಾಜಭವನದಲ್ಲಿ ಗುರುವಾರ ಆಯೋಜಿಸಿದ್ದ ವಿಶ್ವ ಪರಿಸರ ದಿನ ಕಾರ್ಯಕ್ರಮದಲ್ಲಿ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದನ್ನು ಕಾರ್ಯಕ್ರಮ ಪಟ್ಟಿಗೆ ಸೇರಿಸಲು ರಾಜಭವನ ಒತ್ತಾಯಿಸಿತ್ತು. ಆದರೆ ಅದನ್ನು ನಿರಾಕರಿಸಿ, ಕಾರ್ಯಕ್ರಮವನ್ನು ರಾಜ್ಯ ಕೃಷಿ ಇಲಾಖೆ ಬೇರೆಡೆಗೆ ಸ್ಥಳಾಂತರಿಸಿತ್ತು.

ಈ ಘಟನೆಯು ರಾಜ್ಯಪಾಲ ಅರ್ಲೇಕರ್ ಮತ್ತು ಮಾರ್ಕ್ಸಿಸ್ಟ್ ಪಕ್ಷ ನೇತೃತ್ವದ ಎಲ್‌ಡಿಎಫ್ ಸರ್ಕಾರದ ನಡುವಿನ ಜಟಾಪಟಿಗೆ ಕಾರಣವಾಗಿದೆ. ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ರಾಜಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅರ್ಲೇಕರ್ ಅವರು ಭಾರತ ಮಾತಾ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ್ದಾರೆ.

ಆರ್‌ಎಸ್‌ಎಸ್‌ ಸಿದ್ಧಾಂತವನ್ನು ಪ್ರಚಾರ ಮಾಡಲು ರಾಜಭವನವನ್ನು ಬಳಕೆ ಮಾಡುವ ಮೂಲಕ ಅರ್ಲೇಕ‌ರ್ ಅವರು ದೇಶದ ಸಂವಿಧಾನಕ್ಕೆ ಬಹಿರಂಗ ಸವಾಲೆಸೆದಿದ್ದಾರೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!