ಯುದ್ಧದ ಅಖಾಡಕ್ಕೆ ಅಮೇರಿಕ ಎಂಟ್ರಿ; ಇರಾನ್ ಪರಮಾಣು ನೆಲೆ ಮೇಲೆ ಅಮೆರಿಕಾ ದಾಳಿ

Picture of Savistara

Savistara

Bureau Report

ಟೆಲ್‌ ಅವೀವ್: ಇಸ್ರೇಲ್-ಇರಾನ್ (Israel-Iran)ಯುದ್ಧದ ಅಖಾಡಕ್ಕೆ ವಿಶ್ವದ ದೊಡ್ಡಣ್ಣ ಅಮೆರಿಕ ಎಂಟ್ರಿಯಾಗಿದೆ. ರಾತ್ರೋರಾತ್ರಿ ಇರಾನ್‌ನ ಪರಮಾಣು ನೆಲೆಗಳ ಮೇಲೆ ದಾಳಿ ನಡೆಸಿದೆ ಎಂದು ವರದಿಯಾಗಿದೆ.ಕಳೆದ ಕೆಲ ದಿನಗಳಿಂದ ಇಸ್ರೇಲ್-ಇರಾನ್ ನಡುವೆ ಯುದ್ಧ ನಡೆಯುತ್ತಿದೆ. ದಿನಕಳೆದಂತೆ ಯುದ್ಧ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಈ ನಡುವೆ ತಡರಾತ್ರಿ ಅಮೆರಿಕ ಇರಾನ್‌ ನ ಮೂರು ಪರಮಾಣು ತಾಣಗಳ ಮೇಲೆ ಏಕಾಏಕಿ ದಾಳಿ ನಡೆಸಿದೆ.ಪ್ರಾಥಮಿಕ ವರದಿಗಳ ಪ್ರಕಾರ, ದಾಳಿ ನಡೆಸಲು ಎರಡು ಬಿ2 ಬಾಂಬರ್ ವಿಮಾನಗಳನ್ನು ಬಳಸಲಾಗಿದೆ ಎಂದು ವರದಿಯಾಗಿದೆ.ಫೋರ್ಡೋ, ನಟಾಂಜ್, ಎಸ್ಪಹಾನ್ ಮೇಲೆ ಅಮೆರಿಕ ದಾಳಿ ಮಾಡಿದೆ. ಈ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ (Donald Trump) ಅವರೇ ಹೇಳಿಕೊಂಡಿದ್ದಾರೆ.’ಇರಾನ್‌ನ 3 ಪರಮಾಣು ನೆಲೆಗಳಾದ ಫೋರ್ಡೋ, ನಟಾಂಜ್ ಮತ್ತು ಇಸಹಾನ್ ಮೇಲೆ ದಾಳಿ ಯಶಸ್ವಿಯಾಗಿದೆ. ಎಲ್ಲಾ ಯುದ್ಧ ವಿಮಾನಗಳು ಈಗ ಇರಾನ್‌ನಿಂದ ಹೊರಗೆ ಬಂದಿವೆ. ಜಗತ್ತಿನ ಅತ್ಯಂತ ಪ್ರಬಲಶಾಲಿ ಸೇನೆ, ಶಸ್ತ್ರಾಸ್ತ್ರಗಳನ್ನು ಹೊಂದಿರುವ ಅಮೆರಿಕ ಬಿಟ್ಟು ಬೇರೆ ಯಾರೂ ಕೂಡ ಇದನ್ನು ಮಾಡಲು ಸಾಧ್ಯವಿಲ್ಲ. ಅಭಿನಂದನೆಗಳು ಗ್ರೇಟ್ ಅಮೆರಿಕಕ್ಕೆ. ಈಗ ಶಾಂತಿಯ ಸಮಯ’ ಎಂದು ಟ್ರಂಪ್ ‘ಎಕ್ಸ್’ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!