ದೇಶಕ್ಕೆ ಗಂಡಾಂತರ,ದೇಶದಲ್ಲಿ ಊಹಿಸಲಾಗದ ದುಃಖ: ಕೋಡಿ ಮಠ ಶ್ರೀ ಹೇಳಿಕೆ

Picture of Savistara

Savistara

Bureau Report

ಹಾಸನ: ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವಿಪ್ಲವವಾಗುವ ಲಕ್ಷಣಗಳಿವೆ ಎಂದು ಹಾರನಹಳ್ಳಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.ಶ್ರೀಮಠದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿ, ನಿರೀಕ್ಷೆಗೂ ಮೀರಿದ ದುಃಖ ದೇಶವನ್ನು ಬಾಧಿಸಲಿದೆ.ಮೇಘ ಸ್ಫೋಟ, ಯುದ್ಧ, ಅರಸನಾಲಯಕ್ಕೆ ಕಾರ್ಮೋಡ ಕವಿಯಲಿದೆ. ಇದು ರಾಜ್ಯಕ್ಕೂ, ದೇಶಕ್ಕೂ ಅನ್ವಯಿಸಲಿದೆ. ಆದರೆ ರಾಜ್ಯದಲ್ಲಿ ಸಿದ್ದರಾಮಯ್ಯರಿಗೆ ಏನೂ ತೊಂದರೆ ಇಲ್ಲ. ಯುದ್ಧ ನಿಲ್ಲುವುದು ಸಂವತ್ಸರ ಪರ್ವದಲ್ಲಿ ಕಷ್ಟ. ದ್ವೇಷ, ಅಸೂಯೆಗೆ ಒಂದಿಬ್ಬರು ಬಲಿಯಾಗುತ್ತಾರೆ. ಊಹಿಸಲಾರದ ದುಃಖ ಈ ಭಾರತಕ್ಕೂ ಬರುತ್ತದೆ ಎಂದರು.ಸಂಕ್ರಾಂತಿ ಒಳಗೆ ಮೇಘ ಸ್ಫೋಟವಾಗುವ ಸಾಧ್ಯತೆ ಇದೆ ಹಾಗೂ ಜನಜೀವನ ಅಸ್ಥಿರವಾಗುತ್ತದೆ. ಮನೆಯಿಂದ ಹೊರ ಹೋದವರು ಯಾವಾಗ ವಾಪಸ್ ಬರುತ್ತಾರೆ ಎಂದು ಹೇಳುವುದು ಕಷ್ಟ. ಜನವರಿ ಒಳಗೆ ಒಂದು ದೊಡ್ಡ ಗಂಡಾಂತರವೂ ದೇಶಕ್ಕೆ ಇದೆ. ಸಾಗರದಲ್ಲಿ ಜಲಸ್ಫೋಟವೂ ಆಗಲಿದೆ. ಸೂ …. ಮಗನುಟ್ಟಿ, ಆಳುವನು ಮುನಿಪುರವ, ಯುದ್ಧವಿಲ್ಲದೆ ಮಡಿಯೆ ಪುರವೆಲ್ಲ ಕೂಳಾದೀತು ಎಂದು ಶ್ರೀಗಳು ಹೇಳಿದ್ದಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!