ಏ‌ರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ: ರಿಯಾದ್‌ನಲ್ಲಿ ತುರ್ತು ಭೂಸ್ಪರ್ಶ

Picture of Savistara

Savistara

Bureau Report

ನವದೆಹಲಿ: ಬರ್ಮಿಂಗ್‌ಹ್ಯಾಂನಿಂದ ರಾಷ್ಟ್ರ ರಾಜಧಾನಿ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬೆದರಿಕೆ ಕರೆ ಬಂದ ಕಾರಣ ವಿಮಾನವನ್ನು ಸೌದಿಯ ರಿಯಾದ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

‘ಜೂನ್ 21ರಂದು ಬರ್ಮಿಂಗ್‌ಹ್ಯಾಂನಿಂದ ದೆಹಲಿಗೆ ಬರುತ್ತಿದ್ದ AI114 ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಕೂಡಲೇ ವಿಮಾನವನ್ನು ರಿಯಾದ್ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಭೂಸ್ಪರ್ಶ ಮಾಡಿಸಿ ಭದ್ರತಾ ತಪಾಸಣೆ ನಡೆಸಲಾಗಿದೆ. ಎಲ್ಲ ಪ್ರಯಾಣಿಕರನ್ನು ಬೇರೆ ಬೇರೆ ವಿಮಾನಗಳಲ್ಲಿ ಕಳುಹಿಸಿಕೊಡಲಾಗಿದೆ’ ಎಂದು ಏರ್ ಇಂಡಿಯಾ ವಿಮಾನ ಯಾನ ಸಂಸ್ಥೆ ತಿಳಿಸಿದೆ.ಜೂನ್ 12ರಂದು ಗುಜರಾತ್‌ನ ಅಹಮದಾಬಾದ್ ವಿಮಾನ ದುರಂತದ ಬಳಿಕ ಏರ್ ಇಂಡಿಯಾವು ಸುರಕ್ಷತಾ ತಪಾಸಣೆಗೆ ಒತ್ತು ನೀಡಿದೆ ಮತ್ತು ಸೇವೆಗಳನ್ನು ಕಡಿತಗೊಳಿಸಿದೆ.’ಮಧ್ಯಪ್ರಾಚ್ಯದಲ್ಲಿನ ವಾಯಮಾರ್ಗ ನಿರ್ಬಂಧ, ಯುರೋಪ್ ಮತ್ತು ಪೂರ್ವ ಏಷ್ಯಾದ ವಿಮಾನ ನಿಲ್ದಾಣಗಳಲ್ಲಿ ರಾತ್ರಿ ವೇಳೆಯ ನಿರ್ಬಂಧ, ವಾಯಸಂಚಾರ ದಟ್ಟಣೆ ಹಾಗೂ ಅನಿರೀಕ್ಷಿತ ಸಮಸ್ಯೆಗಳಿಂದಾಗಿ ಕೆಲವೊಮ್ಮೆ ವಿಮಾನಗಳು ವಿಳಂಬವಾಗುತ್ತಿವೆ’ ಎಂದು ತಿಳಿಸಿದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!