ಸರ್ಕಾರ ದುರಾಡಳಿತ, ಜನ ವಿರೋಧಿ ನೀತಿ ಖಂಡಿಸಿ ಗುರುಪುರ ಪಂಚಾಯತ್ ಬಳಿ ಪ್ರತಿಭಟನೆ | ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ಜನಸಾಮಾನ್ಯರಿಗೆ ರಾಜ್ಯ ಸರ್ಕಾರ ಹೊರೆಯಾಗಿದೆ ಸಂಸದ ಕ್ಯಾ ಬ್ರಿಜೇಶ್ ಚೌಟ

Picture of Savistara

Savistara

Bureau Report

ಗುರುಪುರ:ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಅಭಿವೃದ್ಧಿ ಕಾರ್ಯ ಕುಂಠಿತವಾಗಿದೆ,ಅನುದಾನದ ಕೊರತೆಯಿಂದ ಯಾವುದೇ ಅಭಿವೃದ್ಧಿ ಕಾರ್ಯ ಪಂಚಾಯತ್ ಮಟ್ಟದಲ್ಲಿ ನಡೆಯುತ್ತಿಲ್ಲ,ಬಿಜೆಪಿ ಸರ್ಕಾರ ಅವಧಿಯಲ್ಲಿನ ಅನೇಕ ಯೋಜನೆಗಳಿಗೆ ಹಣ ಬಿಡುಗಡೆಯಾಗದೆ ಫಲಾನುಭವಿಗಳಿಗೆ ಸಮಸ್ಯೆಯಾಗಿದೆ ಯೆಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು.

ಗುರುಪುರ ಪಂಚಾಯತ್ ಬಳಿ ರಾಜ್ಯ ಸರ್ಕಾರ ವೈಫಲ್ಯ ವಿರೋಧಿಸಿ ನಡೆದ ಸಭೆಯಲ್ಲಿ ಭಾಗವಹಿಸಿದ ಸಂಸದರು ಕರಾವಳಿ ಜಿಲ್ಲೆ ಬಗ್ಗೆ ಕೂಡ ತಾತ್ಸಾರ ಭಾವ ವನ್ನು ರಾಜ್ಯ ಸರ್ಕಾರ ತೋರುತ್ತಿದೆ ಇಲ್ಲಿನ ಸಂಸ್ಕೃತಿ,ಜೀವನ ಪದ್ದತಿ,ಆಚಾರ ವಿಚಾರ ಗಳ ಎಲ್ಲಾ ರೀತಿಯಲ್ಲೂ ಕರಾವಳಿ ಯನ್ನು ಟಾರ್ಗೆಟ್ ಮಾಡುವ ರೀತಿಯಲ್ಲಿ ಸರ್ಕಾರ ಕೆಲಸ ಮಾಡುತ್ತಿದೆಯೆಂದು ಚೌಟ ವಾಗ್ದಾಳಿ ನಡೆಸಿದರು.ಈ ಸಂದರ್ಭದಲ್ಲಿ ಬಿಜೆಪಿ ಬೆಂಬಲಿತ ಪಂಚಾಯತ್ ಸದಸ್ಯರು,ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!