ವಸತಿ ಹಂಚಿಕೆ ಭ್ರಷ್ಟಾಚಾರ ಆರೋಪ | ಸಚಿವ ಜಮೀರ್ ರಾಜೀನಾಮೆ ಗೆ ಶಾಸಕ ಬೇಳೂರು ಒತ್ತಾಯ

Picture of Savistara

Savistara

Bureau Report

ಶಿವಮೊಗ್ಗ: ವಸತಿ ಹಂಚಿಕೆಯಲ್ಲಿ ಭ್ರಷ್ಟಾಚಾರ ಆರೋಪಎದುರಿಸುತ್ತಿರುವ ವಸತಿ ಸಚಿವರು ರಾಜೀನಾಮೆ ನೀಡಬೇಕೆಂದು ಸಾಗರ ಶಾಸಕರು ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಆಗ್ರಹಿಸಿದ್ದಾರೆ.

ನಗರದಲ್ಲಿಂದು ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಸತಿ ಸಚಿವರ ವಿರುದ್ಧ ಮನೆ ಹಂಚಿಕೆ ವಿಚಾರದಲ್ಲಿ ಹಣ ಕೇಳಿದ್ದಾರೆಂಬ ಆರೋಪ ಕೇಳಿ ಬಂದಿದೆ. ಇದರಿಂದ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ತಕ್ಷಣ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ತನಿಖೆ ಎದುರಿಸಲಿ. ಅವರು ಭ್ರಷ್ಟಾಚಾರ ಮಾಡಿಲ್ಲ ಎಂದು ಸಾಬೀತಾದರೆ ಮತ್ತೆ ತಮ್ಮ ಮಂತ್ರಿ ಸ್ಥಾನಕ್ಕೆ ಬರಲಿ ಎಂದರು.

ಈ ಹಿಂದೆ ಅನೇಕ ಸಚಿವರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಾಗ ಅವರು ರಾಜೀನಾಮೆ ನೀಡಿದ್ದ ಉದಾಹರಣೆಗಳಿವೆ. ಇದರಿಂದ ವಸತಿ ಸಚಿವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎನ್ನುವ ಮೂಲಕ ಸ್ವಪಕ್ಷದವರೇ ವಸತಿ ಸಚಿವರ ರಾಜೀನಾಮೆಗೆ ಆಗ್ರಹಿಸಿದ್ದಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!