ಧರ್ಮಸ್ಥಳದಲ್ಲಿ ನಡೆದಿರುವ ಹಲವು ಅತ್ಯಾಚಾರ, ಕೊಲೆ ಪ್ರಕರಣದ ಬಗ್ಗೆ ಪೊಲೀಸ್‌ ಠಾಣೆಗೆ ಮಾಹಿತಿ ನೀಡುತ್ತೇನೆಂದ ಪತ್ರ ವೈರಲ್: ವ್ಯಕ್ತಿಗೆ ರಕ್ಷಣೆ ನೀಡಲು ಬದ್ಧ ಎಂದ ದ.ಕ. ಎಸ್ಪಿ

Picture of Savistara

Savistara

Bureau Report

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹಲವಾರು ಹತ್ಯೆ, ಹೆಣ್ಮಕ್ಕಳ ಅತ್ಯಾಚಾರ, ಕೊಲೆ ಕೃತ್ಯಗಳ ಬಗ್ಗೆ ತಿಳಿದಿರುವ ವ್ಯಕ್ತಿಯೊಬ್ಬಧರ್ಮಸ್ಥಳ ಠಾಣೆಗೆ ಬಂದು ಮಾಹಿತಿ ನೀಡುವುದಾಗಿ ಬರವಣಿಗೆ ಇರುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮಂಗಳೂರು, ಜೂನ್ 23 : ಬೆಳ್ತಂಗಡಿ ತಾಲೂಕಿನಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹಲವಾರು ಹತ್ಯೆ ಹೆಣ್ಮಕ್ಕಳ ಅತ್ಯಾಚಾರ, ಕೊಲೆ ಕೃತ್ಯಗಳ ಬಗ್ಗೆ ತಿಳಿದಿರುವ ವ್ಯಕ್ತಿಯೊಬ್ಬ ಧರ್ಮಸ್ಥಳ ಠಾಣೆಗೆ ಬಂದು ಮಾಹಿತಿ ನೀಡುವುದಾಗಿ ಬರವಣಿಗೆ ಇರುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಪತ್ರದಲ್ಲಿ ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹಲವಾರು ಹತ್ಯೆ ಮತ್ತು ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ಮತ್ತು ಕೊಲೆಗಳನ್ನು ಮುಚ್ಚಿಹಾಕುವ ಸಲುವಾಗಿ, ಮೃತ ದೇಹಗಳನ್ನು ಹೂತು ಹಾಕಿದ್ದ ವ್ಯಕ್ತಿಯೊಬ್ಬ ತನ್ನ ಪಾಪಪ್ರಜ್ಞೆಯನ್ನು ಪರಿಹರಿಸಿಕೊಳ್ಳಲು ಧರ್ಮಸ್ಥಳ ಪೊಲೀಸ್‌ ಠಾಣೆಗೆ ಕೂಡಲೇ ಹಾಜರಾಗಿ ಶರಣಾಗುವ ನಿರ್ಧಾರ ಮಾಡಿರುತ್ತಾನೆ. ಮತ್ತು, ತಾನು ಹೂತು ಹಾಕಿರುವ ಮೃತದೇಹಗಳನ್ನು ಪೋಲೀಸರ ಸಮ್ಮುಖದಲ್ಲಿ ಹೊರತೆಗೆಯುವ ನಿರ್ಧಾರ ಮಾಡಿರುತ್ತಾನೆ; ಇತ್ತೀಚೆಗೆ ಹೊರ ತೆಗೆದ ಕಳೇಬರವೊಂದುನ್ನು ಪೋಲೀಸರಿಗೆ ಒಪ್ಪಿಸುವುದಾಗಿ ಹೇಳಿದ್ದಾನೆ ಎಂದು ಬರೆದಿರುವ ಪತ್ರ ವೈರಲ್ ಆಗಿದ್ದು ಆತನಿಗೆ ಪೊಲೀಸ್ ರಕ್ಷಣೆ ನೀಡಬೇಕೆಂದು ಬೆಂಗಳೂರಿನ ವಕೀಲರು ಪತ್ರ ಹರಿಯಬಿಟ್ಟಿದ್ದಾರೆ.

ಪತ್ರ ವೈರಲ್ ಆದ ಬೆನ್ನಲ್ಲೆ ದಕ್ಷಿಣ ಕನ್ನಡ ಪೊಲೀಲ್ ಇಲಾಖೆ ವತಿಯಿಂದ ಪ್ರಕಟಣೆ ನೀಡಲಾಗಿದ್ದು, ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ, ವ್ಯಕ್ತಿಯೊಬ್ಬ ಧರ್ಮಸ್ಥಳ ಠಾಣೆಗೆ ಬಂದು ಮಾಹಿತಿ ನೀಡುವುದಾಗಿ ಬರವಣಿಗೆ ಇರುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿರುವುದು ಕಂಡುಬಂದಿರುತ್ತದೆ. ಈ ಪತ್ರದ ನೈಜತೆಯನ್ನು ಪರಿಶೀಲಿಸುವ ಸಲುವಾಗಿ, ಸದ್ರಿ ಪತ್ರದಲ್ಲಿ ನಮೂದಿಸಲಾಗಿದ್ದ ಬೆಂಗಳೂರಿನ ವಕೀಲರಿಗೆ ಧರ್ಮಸ್ಥಳ ಪೊಲೀಸ್ ಠಾಣೆಯಿಂದ ಸಂಪರ್ಕಿಸಿದಾಗ, ಸದ್ರಿ ವಕೀಲರು ವ್ಯಕ್ತಿಯೋರ್ವ ತನ್ನ ಬಳಿ ಬಂದು ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ತನಗೆ ಮಾಹಿತಿ ಇರುವುದಾಗಿ ಹಾಗೂ ತಾನು ಪೊಲೀಸ್ ಠಾಣೆಗೆ ಶರಣಾಗಿ ಮಾಹಿತಿಯನ್ನು ನೀಡಲು ಸಿದ್ದವಿರುವುದಾಗಿ ತಿಳಿಸಿರುತ್ತಾರೆ. ಸದ್ರಿ ವ್ಯಕ್ತಿಗೆ ಅಗತ್ಯವಾದ ಕಾನೂನು ಸುರಕ್ಷತೆಯನ್ನು ಕಲ್ಪಿಸಿ, es ಬಳಿಕ ಆತನನ್ನು ಠಾಣೆಗೆ ಹಾಜರುಪಡಿಸುವುದಾಗಿ ವಕೀಲರು ತಿಳಿಸಿರುತ್ತಾರೆ.ಅದರಂತೆ ಸದ್ರಿ ವ್ಯಕ್ತಿ ಹಾಜರಾಗಿ ಮಾಹಿತಿ ನೀಡಿದಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ಎಸ್ಪಿ ಡಾ.ಅರುಣ್ ತಿಳಿಸಿದ್ದಾರೆ. ಖಡಕ್ ಎಸ್ಪಿ ಜಿಲ್ಲೆಗೆ ಬಂದಿರುವಾಗಲೇ ಈ ರೀತಿಯ ಪತ್ರ ವೈರಲ್ ಆಗಿರುವುದು ಕುತೂಹಲ ಮೂಡಿಸಿದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!