ಅಂತೂ ಇಸ್ರೇಲ್-ಇರಾನ್ ನಡುವೆ ಕದನ ವಿರಾಮ ಘೋಷಣೆ

Picture of Savistara

Savistara

Bureau Report

ಬೀರ್‌ಶೆಬಾ (ಇಸ್ರೇಲ್): ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಪ್ರಸ್ತಾಪಿಸಿದ ಕದನ ವಿರಾಮವನ್ನು ಇಸ್ರೇಲ್ ಮತ್ತು ಇರಾನ್ ಮಂಗಳವಾರ ಒಪ್ಪಿಕೊಂಡಿವೆ.

ಆ ಮೂಲಕ ಮಧ್ಯಪ್ರಾಚ್ಯವನ್ನು ಬೆಚ್ಚಿಬೀಳಿಸಿದ 12 ದಿನಗಳ ಯುದ್ಧ ‘ತಾಂತ್ರಿಕ’ವಾಗಿ ಕೊನೆಗೊಂಡಿದೆ.

ಪರಮಾಣು ಕೇಂದ್ರಗಳ ಮೇಲೆ ದಾಳಿಗೆ ಪ್ರತೀಕಾರವಾಗಿ, ಕತಾರ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಸೋಮವಾರ ಇರಾನ್ ಕ್ಷಿಪಣಿ ದಾಳಿ ನಡೆಸಿತ್ತು. ಇದರ ಬೆನ್ನಲ್ಲೇ ಉಭಯ ರಾಷ್ಟ್ರಗಳ ನಡುವೆ ಕದನ ವಿರಾಮ ಏರ್ಪಟ್ಟಿದೆ ಎಂದು ಟ್ರಂಪ್‌ ಘೋಷಿಸಿದ್ದರು.

ಇದರ ಬಳಿಕ ಇಸ್ರೇಲ್ ಅನ್ನು ಗುರಿಯಾಗಿಸಿಕೊಂಡು ಇರಾನ್ ನಡೆಸಿದ ಕೊನೆಯ ಕ್ಷಿಪಣಿ ದಾಳಿಯಲ್ಲಿ 4 ಮಂದಿ ಸಾವಿಗೀಡಾಗದ್ದರು. ಇಸ್ರೇಲ್ ಕೂಡ ಬೆಳಗಿನ ಜಾವ ಇರಾನ್ ಮೇಲೆ ದಾಳಿ ನಡೆಸಿತು. ಈ ಬಳಿಕ ಎರಡೂ ರಾಷ್ಟ್ರಗಳು ಕದನ ವಿರಾಮವನ್ನು ಒಪ್ಪಿಕೊಂಡವು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!