ದುಡ್ಡಿಲ್ಲ ಅಂತ ನಾನು ತಮಾಷೆಗೆ ಹೇಳಿದ್ದಷ್ಟೇ ಗೃಹ ಸಚಿವ ಪರಮೇಶ್ವರ ಸ್ಪಷ್ಟನೆ

Picture of Savistara

Savistara

Bureau Report

ಬೆಂಗಳೂರು: “ದುಡ್ಡಿಲ್ಲ ಅಂತ ಯಾರು ಹೇಳಿದ್ದು?.

ನಾನು ತಮಾಷೆಗೆ ಹೇಳಿದ್ದೇನೆ ಅಷ್ಟೇ” ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅವರದು ಎನ್ನಲಾದ ಆಡಿಯೋ ವೈರಲ್ ಆಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಸದಾಶಿವನಗರದ ನಿವಾಸದ ಬಳಿ ಮಾತನಾಡಿದ ಅವರು, ಸರ್ಕಾರದ ಬಳಿ ಹಣವಿಲ್ಲ ಎಂಬ ತಮ್ಮ ಆಡಿಯೋ ವೈರಲ್ ವಿಚಾರವಾಗಿ ಪ್ರತಿಕ್ರಿಯಿಸಿ, “ಸಿಎಂ 4.9 ಲಕ್ಷ ಕೋಟಿ ಬಜೆಟ್ ಮಾಡಿದ್ದಾರೆ? ನಾನು ಸರ್ಕಾರದ ಬಳಿ ದುಡ್ಡಿಲ್ಲ ಅಂತ ಹೇಳಿಲ್ಲ. ಯಾವುದೇ ರೀತಿಯ ಆರ್ಥಿಕ ಮುಗ್ಗಟ್ಟು ಇಲ್ಲ. ಹಣ ಬಿಡುಗಡೆ ಸ್ವಲ್ಪ ನಿಧಾನ ಆಗಿರಬಹುದು. ಡಿಪಿಆರ್ ಮಾಡೋದ್ರಲ್ಲಿ ತಡ ಆಗಿರಬಹುದು” ಎಂದು ತಿಳಿಸಿದರು.

ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಪ್ರಕರಣ ಸಂಬಂಧ ಮಾತನಾಡಿ, “ನನಗೆ ಬಂದಿರುವ ಮಾಹಿತಿ ಪ್ರಕಾರ ಅನಂತ್‌ ಕುಮಾ‌ರ್ ಹೆಗಡೆ ಹೈವೈನಲ್ಲಿ ಬರಬೇಕಾದರೆ ಘಟನೆ ನಡೆದಿದೆ. ಡ್ರೈವರ್, ಗನ್ ಮ್ಯಾನ್ ಕಾರು ನಿಲ್ಲಿಸಿ ಹೊಡೆದಿದ್ದಾರೆ ಎಂದು ಹೇಳಲಾಗಿದೆ. ಆದರೆ ಗನ್ ಮ್ಯಾನ್ ಹೊಡೆದಿಲ್ಲ ಅಂತಿದ್ದಾರೆ. ಇದರ ಬಗ್ಗೆ ಈಗಲೇ ಹೇಳೋಕೆ ಆಗಲ್ಲ. ಇದರ ಬಗ್ಗೆ ಸಂಪೂರ್ಣ ತನಿಖೆ ಆಗಬೇಕಿದೆ. ಇನ್ನಷ್ಟು ದಿನ ಕಾದು ನೋಡೋಣ.

ತನಿಖೆಯಲ್ಲಿ ಏನು ಬರುತ್ತೆ ಅಂತ ನೋಡೋಣ” ಕೈ ಶಾಸಕರ ಅಸಮಾಧಾನ ವಿಚಾರವಾಗಿ ಮಾತನಾಡಿ, “ಕ್ಷೇತ್ರಗಳಿಗೆ ಅನುದಾನ ಬಂದಿಲ್ಲ ಅಂತ ಇದೆ. ಕೆಲ ಶಾಸಕರು ಹೇಳಿರೋದನ್ನು ನಾನು ಗಮನಿಸಿದ್ದೇನೆ. ಯಾರಿಗೆ ಆಗಲಿ ಅನುದಾನ ಇಲ್ಲ ಅಂದ್ರೆ ಕಷ್ಟ. ಬೇಜಾರು ಆಗೋದು ಸಹಜ, ಅದಕ್ಕೆ ಹೇಳಿದ್ದಾರೆ. ಇದರ ಬಗ್ಗೆ ಸಿಎಂ ಗಮನಹರಿಸ್ತಾರೆ” ಎಂದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!