ಕಾನೂನು ಸಮ್ಮತವಾಗಿ ಚುನಾವಣೆ,ಈ ಬಗ್ಗೆ ಸಂಶಯವಿದ್ದರೆ ಚರ್ಚೆಗೆ ಬರುವಂತೆ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ಆಹ್ವಾನ

Picture of Savistara

Savistara

Bureau Report

ನವದೆಹಲಿ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ

ಗೋಲ್ ಮಾಲ್ ನಡೆದಿದೆ ಎಂದು ಆರೋಪಿಸುತ್ತಲೇ ಇರುವ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ ಅವರನ್ನು ಈ ಬಗ್ಗೆ ಮುಕ್ತವಾಗಿ ಚರ್ಚಿಸಲು ಬರುವಂತೆ ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಆಹ್ವಾನ ನೀಡಿದೆ.

ಚುನಾವಣೆ ಕುರಿತು ರಾಹುಲ್ ಗಾಂಧಿ ಅವರು ಪ್ರಮುಖ ಪತ್ರಿಕೆಯೊಂದಕ್ಕೆ ಬರೆದ ಲೇಖನಕ್ಕೆ ಉತ್ತರವೆಂಬಂತೆ ಇಮೇಲ್ ಮೂಲಕ ಪತ್ರ ರವಾನಿಸಿರುವ ಆಯೋಗ, ದೇಶದಲ್ಲಿನ ಯಾವುದೇ ಚುನಾವಣೆಗಳನ್ನು ಕಾನೂನುಬದ್ಧವಾಗಿಯೇ ನಡೆಸಲಾಗುತ್ತದೆ. ಆದಾಗ್ಯೂ, ತಮಗೆ ಅನುಮಾನ ಮತ್ತು ಸಮಸ್ಯೆಗಳಿದ್ದಲ್ಲಿ ಬಗೆಹರಿಸಿಕೊಳ್ಳಲು ನೀವೇ ಸಮಯ ಮಾಡಿಕೊಂಡು ಚರ್ಚೆಗೆ ಬನ್ನಿ ಎಂದು ಸೂಚಿಸಿದೆ.

ಚುನಾವಣೆಗಳ ಪಾರದರ್ಶಕತೆ ಬಗ್ಗೆ ಈಗಾಗಲೇ ಸಾಕಷ್ಟು ಮಾಹಿತಿ ನೀಡಲಾಗಿದೆ. ಆದಾಗ್ಯೂ, ನಿಮ್ಮ ಅನುಮಾನಗಳು ಬಗೆಹರಿದಿಲ್ಲ. ನಿಮಗೆ ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಆಯೋಗಕ್ಕೆ ಪತ್ರ ಬರೆಯಬಹುದು ಅಥವಾ ನಮ್ಮೊಂದಿಗೆ ಸಭೆ, ಸಂವಾದ ನಡೆಸಲು ತಾವೇ ಖುದ್ದಾಗಿ ಬಿಡುವು ಮಾಡಿಕೊಂಡು ಮಾತುಕತೆಗೆ ಬರಬಹುದು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!