ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ದೇವಾಲಯ ಪ್ರಾಧಿಕಾರ ರಚಿಸುವ ಚಿಂತನೆ ಸರ್ಕಾರ ಮಟ್ಟದಲ್ಲಿದೆ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ

Picture of Savistara

Savistara

Bureau Report

ಬೈಂದೂರು: ”ಮೈಸೂರು ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ
ಘಾಟಿ ಸುಬ್ರಹ್ಮಣ್ಯ ದೇವಳ ಅಭಿವೃದ್ಧಿ ಪ್ರಾಧಿಕಾರ, ಹುಲಿಗೆರಮ್ಮ ಅಭಿವೃದ್ಧಿ ಪ್ರಾಧಿಕಾರದ ಮಾದರಿಯಲ್ಲಿ ಕೊಲ್ಲೂರು ಶ್ರೀಮೂಕಾಂಬಿಕಾ ದೇವಳ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಳದ ಸಮಗ್ರ ಅಭಿವೃದ್ಧಿಗಾಗಿ ಪ್ರಾಧಿಕಾರ ರಚಿಸುವ ಚಿಂತನೆ ಇದೆ.” ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ಕೊಲ್ಲೂರು ದೇವಳಕ್ಕೆ ಮಂಗಳವಾರ ಭೇಟಿ ನೀಡಿ, ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ದೇವಳದ ಅಭಿವೃದ್ಧಿ ಕಾವ್ಯ ಗಳ ಬಗ್ಗೆ ಸಭೆ ನಡೆಸಿ, ಸುದ್ದಿಗಾರರೊಂದಿಗೆ ಮಾತನಾಡಿದರು.

”ಕೊಲ್ಲೂರು ಮೂಕಾಂಬಿಕಾ ದೇವಳದ ವತಿಯಿಂದ ವೈದ್ಯಕೀಯ ಕಾಲೇಜು, ಆಸ್ಪತ್ರೆ, ನರ್ಸಿಂಗ್ ಕಾಲೇಜು, ಹಾಸ್ಟೆಲ್ ನಿರ್ಮಾಣ ಸೇರಿದಂತೆ ಹಲವು ಬೇಡಿಕೆಗಳಿದ್ದು ಜುಲೈ ಮೊದಲ ವಾರದಲ್ಲಿ ಇಲ್ಲಿನ ಶಾಸಕರು, ಮಾಜಿ ಶಾಸಕರು, ದೇವಳದ ಆಡಳಿತ ಮಂಡಳಿಯೊಂದಿಗೆ ಬೆಂಗಳೂರಿನಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿ, ಸಮಗ್ರವಾಗಿ ಚರ್ಚಿಸಲಾಗುವುದು. ಇಲ್ಲಿನ ಶೌಚಾಲಯ ಮೇಲ್ದರ್ಜೆ, ಪಾರ್ಕಿಂಗ್ ಸಮಸ್ಯೆ, ಒಳಚರಂಡಿ ಸಮಸ್ಯೆ ಬಗ್ಗೆ ಚರ್ಚಿಸಿ ಶಾಶ್ವತ ಪರಿಹಾರಕ್ಕೆ ಕ್ರಮ

ಯುಪಿಎ ಸರಕಾರ ಇದ್ದಾಗ ನಗರ ಪ್ರದೇಶ ಗಳಿಗೆ ನರ್ಮ್ ಸ್ವೀಂನಲ್ಲಿ ಬಸ್‌ಗಳನ್ನು ಶೇ.50ರಷ್ಟು ರಿಯಾಯಿತಿ ದರದಲ್ಲಿ ನೀಡಲಾಗಿದೆಂದರು

ಈ ವೇಳೆ ದೇವಳದ ವತಿಯಿಂದ ಗೌರವಿಸಲಾಯಿತು.
ಒತ್ತುವರಿ ತೆರವಿಗೆ ಕ್ರಮ: ಕೊಲ್ಲೂರು ರಾಜ್ಯದಲ್ಲಿ ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ಹಲವು ದೇವಾಲಯಗಳಲ್ಲಿ ದೇವಾಲಯದ ಜಾಗ ಒತ್ತುವರಿಯಾದ ಪ್ರಕರಣವಿದೆ. ಮುಜರಾಯಿ ದೇವಾಲಯಗಳಲ್ಲಿನ ಸುಮಾರು 15 ಸಾವಿರ ಎಕರೆ ಜಾಗ ಒತ್ತುವರಿ ತೆರವುಗೊಳಿಸಲಾಗಿದೆ. ಇನ್ನೂ 20 ಸಾವಿರ ಎಕರೆ ಜಾಗ ಒತ್ತುವರಿ ಪ್ರಕರಣ ಬಾಕಿಯಿದ್ದು, ಹಂತಹಂತವಾಗಿ ಎಲ್ಲ ಒತ್ತುವರಿಯನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು,” ಎಂದರು

ಸರಕಾರ ಬದಲಾವಣೆ ಬಳಿಕ ನಿಯಮಗಳನ್ನು ಬದಲಾಯಿಸಿದ್ದಾರೆ. ಈ ಬಾರಿ 700ರಿಂದ 800 ಹೊಸ ಬಸ್

ಖರೀದಿಸಲಾಗಿದ್ದು ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಭಾಗಕ್ಕೆ ಹೆಚ್ಚಿನ ಬಸ್‌ಗಳನ್ನು ನೀಡಲಾಗುತ್ತದೆ ಎಂದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!