ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

Picture of Savistara

Savistara

Bureau Report

ಬೆಂಗಳೂರು: ರಾಜ್ಯದಲ್ಲಿ ಮಳೆಯ ಪ್ರಮಾಣವು ಕಳೆದ 2

ವಾರಗಳಿಂದ ತಗ್ಗಿತ್ತು. ಇದೀಗ ಕರಾವಳಿ ಜಿಲ್ಲೆಗಳು ಸೇರಿ ಇತರೆಡೆ ಮತ್ತೆ ವರುಣ ಆರ್ಭಟಿಸುವ ಲಕ್ಷಣ ಕಂಡು ಬಂದಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂ. 25ರಿಂದ 27ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಹೀಗಾಗಿ ಈ 3 ಜಿಲ್ಲೆಗಳಲ್ಲಿ ಈ ಅವಧಿಯಲ್ಲಿ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್‌ ಘೋಷಿಸಿದೆ.

ಕರಾವಳಿ ಜಿಲ್ಲೆಗಳ ಸಮೀಪದಲ್ಲಿರುವ ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಉತ್ತರ ಒಳನಾಡಿದ ಬೆಳಗಾವಿ ಜಿಲ್ಲೆಗಳಲ್ಲೂ ಬುಧವಾರ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದರೆ, ಇನ್ನು ಧಾರವಾಡ, ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಬುಧವಾರ ಹಳದಿ ಅಲರ್ಟ್ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳ ಕಾಲ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.ಗಾಳಿಯ ವೇಗವು ಪ್ರತಿ ಗಂಟೆಗೆ 50 ರಿಂದ 60 ಕಿ.ಮೀ ಇರಲಿದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!