ಸುಳ್ಯದ ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ಇದರ ವಾರ್ಷಿಕ ಮಹಾಸಭೆ ಮತ್ತು ಪದಗ್ರಹಣ ಸಮಾರಂಭ

Picture of Savistara

Savistara

Bureau Report

ಸುಳ್ಯದ ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ಇದರ ವಾರ್ಷಿಕ ಮಹಾಸಭೆ ಮತ್ತು ಪದಗ್ರಹಣ ಸಮಾರಂಭವು ಸುಳ್ಯದ ಸಿ.ಎ ಬ್ಯಾಂಕ್ ಸಭಾಭವನದಲ್ಲಿ ಜೂ.24 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಶಶಿಕಲಾ ಹರ ಪ್ರಸಾದ್ ವಹಿಸಿದ್ದರು. ಕಾರ್ಯದರ್ಶಿ ಗುಣವತಿ ಕೊಲ್ಲಂತಡ್ಕ ವರದಿ ವಾಚಿಸಿದರು. ಜಯಂತಿ ಜನಾರ್ಧನ್ ಲೆಕ್ಕಪತ್ರ ಮಂಡಿಸಿದರು. ಈ ಸಂದರ್ಭದಲ್ಲಿ ಮುಂದಿನ ಅವಧಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಶ್ರೀಮತಿ ಪುಷ್ಪ ಮೇದಪ್ಪ ಉಪಾಧ್ಯಕ್ಷರಾಗಿ ಶ್ರೀಮತಿ ಗುಣವತಿ ಕೊಲ್ಲಂತಡ್ಕ ಕಾರ್ಯದರ್ಶಿ, ಶ್ರೀಮತಿ ಲೋಲಾಕ್ಷಿ ದಾಸನಕಜೆ, , ಖಜಾಂಜಿ ಶ್ರೀಮತಿ ಶಾರದ. ಡಿ. ಶೆಟ್ಟಿ, ಸಹ ಕಾರ್ಯದರ್ಶಿಯಾಗಿ ಶ್ರೀಮತಿ ವೀಣಾ ಮೋಂಟಡ್ಕ ಸಹ ಖಜಾಂಜಿ ಯಾಗಿ ಶ್ರೀಮತಿ ಚಂದ್ರಾ ಹೊನ್ನಪ್ಪ, ಸಂಘಟನಾ ಕಾರ್ಯದರ್ಶಿ ಶ್ರೀಮತಿ ಜಯಂತಿ ಜನಾರ್ಧನ, ಶ್ರೀಮತಿ ಶಶಿಕಲಾ ಹರಪ್ರಸಾದ್, ಶ್ರೀಮತಿ ಮಮತಾ ಬೊಳುಗಲ್ಲು,ಶ್ರೀಮತಿ ಶಶಿಕಲಾ.ಎ. , ಶ್ರೀಮತಿ ಸರಸ್ವತಿ ಕಕ್ಕಾಡು, ಶ್ರೀಮತಿ ಯಶೋಧ ಬಾಳೆಗುಡ್ಡೆ, ಶ್ರೀಮತಿ ಸುಜಾತ ರೈ, ಶ್ರೀಮತಿ ದಿವ್ಯ ಮಡಪ್ಪಾಡಿ, ಶ್ರೀಮತಿ ರಾಜೇಶ್ವರಿ ಕುಮಾರಸ್ವಾಮಿ ನಿರ್ದೇಶಕ ರಾಗಿ ಆಯ್ಕೆಯಾದರು. ಈ ಸಂದರ್ಭ ಸಿ.ಎ ಬ್ಯಾಂಕ್ ಅಧ್ಯಕ್ಷರಾದ ವಿಕ್ರಂ ಅಡ್ಪಂಗಾಯ ಮತ್ತು ತಾರುಣ್ಯ ಬ್ಯೂಟಿ ಪಾರ್ಲರ್ ಮಾಲಕಿ ಶ್ರೀಮತಿ ಕವಿತಾ ರೈ ಇವರನ್ನು ಗೌರವಿಸಲಾಯಿತು. ಸಭೆಯಲ್ಲಿ ಅನುಷ್ಠಾನ ಸಮಿತಿ ಸದಸ್ಯರು ಗ್ರಾಮ ಸಂಚಾಲನಾ ಸಮಿತಿ ಸದಸ್ಯರು ನಿವೃತ್ತ ಶಿಕ್ಷಕಿಯರು ಉಪಸ್ಥಿತರಿದ್ದರು. ಶ್ರೀಮತಿ ಪುಷ್ಪಾ ಮೇದಪ್ಪ ವಂದೇ ಮಾತರಂ ಗೀತೆ ಹಾಡಿದರು. ಶ್ರೀಮತಿ ಶಶಿಕಲಾ ಹರ ಪ್ರಸಾದ್ ಸ್ವಾಗತಿಸಿ, ಶ್ರೀಮತಿ ಸವಿತಾ ಕಾಯರ ವಂದಿಸಿದರು. ಶ್ರೀಮತಿ ಶಾರದಾ ಡಿ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!