ಬೆಳೆ ವಿಮೆ ಕಂತು ಪಾವತಿಸಲು ಜುಲೈ 31 ಕಡೆಯ ದಿನ

Picture of Savistara

Savistara

Bureau Report

ಮಂಗಳೂರು : ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯ 2025-26ನೇ ಸಾಲಿನ ನೋಂದಣಿಗೆ ಅಧಿಕೃತ ಆದೇಶ ಹೊರಬಿದ್ದಿದ್ದು, ವಿಮಾ ಕಂತು ಪಾವತಿಸಲು ಜುಲೈ 31 ಕಡೆಯ ದಿನವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಜೂ.25ರಂದು ಯೋಜನೆಯ ಸುತ್ತೋಲೆ ಬಂದಿದೆ.

ದಕ್ಷಿಣ ಕನ್ನಡ ಜಿಲ್ಲೆಗೆ ಈ ಹಿಂದಿನಂತೆ ಅಡಿಕೆ ಮತ್ತು ಕಾಳುಮೆಣಸು ಕೃಷಿಗೆ ಮಾತ್ರ ವಿಮಾ ಕಂತು ಪಾವತಿಸಲು ಅವಕಾಶವಿದ್ದು, ಅಡಿಕೆಗೆ ಎಕ್ರೆಗೆ ರೂ.2590/- ಮತ್ತು ಕಾಳುಮೆಣಸಿಗೆ ಎಕ್ರೆಗೆ ರೂ.951/- ನಿಗದಿಪಡಿಸಲಾಗಿದೆ. ವಿಮಾ ಕಂತು ಪಾವತಿಸಲು ಅಂತಿಮ ದಿನಾಂಕ ಮತ್ತು ವಿಮಾಕಂತು ಬೆಳೆ ಸಾಲ ಪಡೆದ ಮತ್ತು ಬೆಳೆ ಸಾಲ ಪಡೆಯದ ರೈತರಿಗೆ ಒಂದೇ ಆಗಿರುತ್ತದೆ. ಬೆಳೆ ವಿಮಾ ಯೋಜನೆಯಲ್ಲಿ ಗ್ರಾಮ ಪಂಚಾಯತ್‌ಗಳನ್ನು ವಿಮಾ ಘಟಕಗಳಾಗಿ ಸರ್ಕಾರದ ಆದೇಶದಲ್ಲಿ ಅಧಿಸೂಚಿಸಲಾಗಿದ್ದು, ಅಡಿಕೆ ಮತ್ತು ಕಾಳುಮೆಣಸು ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರು ಪಾಲ್ಗೊಳ್ಳಬಹುದಾಗಿದ್ದು, ಬೆಳೆ ಸಾಲ ಪಡೆಯದ ರೈತರಿಗೆ ಈ ಯೋಜನೆಯು ಐಚ್ಛಿಕವಾಗಿದ್ದು, ಬೆಳೆ ಸಾಲ ಪಡೆದ ರೈತರು ಯೋಜನೆಯಲ್ಲಿ ಪಾಲ್ಗೊಳ್ಳದೇ ಇರಲು ಇಚ್ಛಿಸಿದಲ್ಲಿ ನೋಂದಣಿಯ ಅಂತಿಮ ದಿನಾಂಕದ ಒಂದು ವಾರದೊಳಗೆ ಬೆಳೆ ಸಾಲ ಪಡೆದ ಹಣಕಾಸು ಸಂಸ್ಥೆಗೆ ಮುಚ್ಚಳಿಕೆ ಪತ್ರವನ್ನು ನೀಡಬೇಕಾಗುತ್ತದೆ. ವಿಮಾ ಕಂತು ಪಾವತಿಸುವ ರೈತರು

ಫ್ರುಟ್ ತಂತ್ರಾಂಶದ ನೋಂದಣಿ ಸಂಖ್ಯೆಯನ್ನು ಹೊಂದಿರಬೇಕಿದ್ದು, ಸದರೀ ನೋಂದಣಿ ಸಂಖ್ಯೆಗೆ ಪಹಣಿ ವಿವರ ಜೋಡಣೆ ಆಗಿರಬೇಕು. ವಿಮೆ ಮಾಡಿಸಿರುವ ರೈತರಿಗೆ ವಿಮೆ ಮಾಡಲ್ಪಟ್ಟ ಬೆಳೆಗಳಿಗೆ 2025ನೇ ಜುಲೈ 1ರಿಂದ 2026ನೇ ಜೂನ್ 30ರವರೆಗೆ ವಿಮಾ ರಕ್ಷಣಾ ಅವಧಿ ಇರುತ್ತದೆ.

ವಿಮಾ ನಷ್ಟ ಪರಿಹಾರವು ಆಧಾರ್ ಪೇಮೆಂಟ್ ಸಿಸ್ಟಮ್ ಮೂಲಕ ಆಗುವುದರಿಂದ ವಿಮಾ ಅರ್ಜಿಯಲ್ಲಿ ಸಕ್ರಿಯ ಆಧಾರ್ ಮಾಹಿತಿಯನ್ನು ನೀಡಬೇಕಾಗಿದೆ. ಬೆಳೆ ಸಾಲ ಹೊಂದಿಲ್ಲದ ರೈತರು ಆಧಾರ್ ಮಾಹಿತಿಯೊಂದಿಗೆ ಜಮೀನಿನ ಪಹಣಿ ಪತ್ರ, ಉಳಿತಾಯ ಖಾತೆ ದಾಖಲೆಗಳು, ಸ್ವಯಂಘೋಷಣೆ ನಮೂನೆಗಳನ್ನು, ಪ್ರೀಮಿಯಂ ಮೊತ್ತದೊಂದಿಗೆ ಹಣಕಾಸು ಸಂಸ್ಥೆಗಳಿಗೆ ಸಲ್ಲಿಸಿ ನೋಂದಣಿ ಮಾಡಬೇಕಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಸಹಕಾರ ಸಂಘಗಳು, ತೋಟಗಾರಿಕಾ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!