ಸಂಸದ ಬಿವೈ ರಾಘವೇಂದ್ರ ರ ಕನಸು ಈಡೇರುವ ಸಮಯ

Picture of Savistara

Savistara

Bureau Report

ದಶಕಗಳ ಕಾತರತೆಗೆ ಲೋಕಾರ್ಪಣೆಯ ಕ್ಷಣಗಣನೆ..!!

ಮಲೆನಾಡ ಹಚ್ಚ ಹಸಿರಿನ ರಾಜಧಾನಿ ಶಿವಮೊಗ್ಗ ಜಿಲ್ಲೆ ಹಲವಾರು ವಿಶೇಷತೆಗಳಿಂದ ವಿಶ್ವ ಭೂಪಟದಲ್ಲಿ ಗುರುತಿಸಿಕೊಂಡಿದೆ. ಅದರಲ್ಲೂ ವಿಶೇಷವಾಗಿ ಸಾಗರ ತಾಲ್ಲೂಕಿನ ಶರಾವತಿ ಹಿನ್ನೀರಿನ ಅಂಬಾರಗೋಡ್ಲು – ಕಳಸವಳ್ಳಿ ನಡುವೆ ಸಾಗುವ ಹಾದಿಗೆ ನಿರ್ಮಾಣ ಮಾಡಿರುವ ಸಿಗಂದೂರು ಸೇತುವೆ ಒಂದು ಹೊಸ ಮೈಲಿಗಲ್ಲು.

ನವನವೀನ ತಂತ್ರಜ್ಞಾನ ಹಾಗೂ ಆಧುನಿಕ ತಾಂತ್ರಿಕ ವ್ಯವಸ್ಥೆಯಿಂದ ಅತ್ಯಂತ ಅಚ್ಚುಕಟ್ಟಾಗಿ ಸುಮಾರು 430.00 ಕೋಟಿ ಅನುದಾನದಲ್ಲಿ ರಾಜ್ಯದ ಅತಿ ಉದ್ದದ 2.25 ಕಿ.ಮೀ ಕೇಬಲ್ ಆಧಾರಿತ ಸೇತುವೆ ಕಾಮಗಾರಿ ಸಾರ್ವಜನಿಕ ಸೇವೆಗೆ ಅಡಿ ಇಡಲು ಸಜ್ಜಾಗಿದೆ.

ಸಾರ್ವಜನಿಕ ಸದ್ಬಳಕೆಗೆ ಅನುಕೂಲ ಮಾಡಿಕೊಡುವ ನಿಮಿತ್ತ ಸೇತುವೆ ಲೋಕಾರ್ಪಣೆಗೆ ದಿನಾಂಕ ನಿಗದಿ ಪಡಿಸುವಂತೆ ಮಾನ್ಯ ಕೇಂದ್ರ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರನ್ನು ಇಂದು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಮಾಡಿದ್ದು, ಇನ್ನೊಂದು ವಾರದಲ್ಲಿ ಉದ್ಘಾಟನಾ ದಿನಾಂಕ ನಿಗದಿಯಾಗುವ ನಿರೀಕ್ಷೆ ಇದೆ.

ಈ ಐತಿಹಾಸಿಕ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಶ್ರಮಿಸಿದವರಲ್ಲಿ ಮೊದಲಿಗರಾದ ಪೂಜ್ಯ ತಂದೆಯವರಾದ ಶ್ರೀ ಬಿ.ಎಸ್. ಯಡಿಯೂರಪ್ಪ ಅವರಿಗೆ ಧನ್ಯವಾದ ತಿಳಿಸುತ್ತಾ, ಇದೇ ಸಂದರ್ಭದಲ್ಲಿ ಈ ಯೋಜನೆಗೆ ಸೂಕ್ತ ಅನುದಾನ ನೀಡಿದ ಪ್ರಧಾನಿ ಶ್ರೀ ನರೇಂದ್ರ ಮೋದಿಜಿ ಅವರಿಗೆ ಹಾಗೂ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರಿಗೆ ಕ್ಷೇತ್ರದ ಜನತೆಯ ಪರವಾಗಿ ಅನಂತ ಅನಂತ ಧನ್ಯವಾದ ಅರ್ಪಿಸುತ್ತೇನೆ.

ಈ ಒಂದು ಇತಿಹಾಸ ಪುಟಗಳಲ್ಲಿ ದಾಖಲಾಗುವಂತ ಐತಿಹಾಸಿಕ ಸೇತುವೆ ನಿರ್ಮಾಣದಿಂದ ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೊಸ ಮೆರುಗು ದೊರೆಯುತ್ತದೆ. ಜೊತೆಗೆ ವ್ಯಾವಹಾರಿಕವಾಗಿ ಜಿಲ್ಲೆಯ ಆರ್ಥಿಕ ಪರಿಸ್ಥಿತಿ ಸದೃಢವಾಗುತ್ತದೆ. ಈ ಮೂಲಕ ಹೊಸ ರೀತಿಯ ಸಾಮಾಜಿಕ ಬದಲಾವಣೆಗೆ ಮುನ್ನುಡಿ ಬರೆಯುತ್ತದೆ ಎಂಬ ವಿಶ್ವಾಸ ಬಲವಾಗಿದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!