ಇನ್ನು ಮುಂದೆ ಎಲ್ಲಾ ಇಲಾಖೆಗಳಲ್ಲಿ ಪೂರ್ಣ ಪ್ರಮಾಣದ ಕನ್ನಡ ಕಡ್ಡಾಯ ಸರ್ಕಾರ ಆದೇಶ

Picture of Savistara

Savistara

Bureau Report

ಬೆಂಗಳೂರು: ಸದ್ಯದ ಪರಿಸ್ಥಿತಿಯಲ್ಲಿ ಪರಭಾಷೆ ವ್ಯಾಮೋಹದಿಂದ

ಕನ್ನಡವನ್ನು ನಿರ್ಲಕ್ಷಿಸಲಾಗುತ್ತಿದೆ. ಹಾಗಾಗಿ ಕನ್ನಡದ ಕಂಪನ್ನು ಉಳಿಸಿಕೊಂಡು, ಬೆಳೆಸುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳಲ್ಲೂ ಕನ್ನಡವನ್ನು ಪೂರ್ಣ ಪ್ರಮಾಣದಲ್ಲಿ ಬಳಸುವಂತೆ ರಾಜ್ಯ ಸರ್ಕಾರ ಮತ್ತೊಂದು ಸುತ್ತೋಲೆ ಹೊರಡಿಸಿದೆ
ಈಗಾಗಲೇ ಅಂಗಡಿ ಮುಂಗಟ್ಟುಗಳ ಬೋರ್ಡ್‌ನಲ್ಲಿ ಶೇ 60ರಷ್ಟು ಕನ್ನಡ ಇರಬೇಕೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅದು ಸರಿಯಾಗಿ ಅನುಷ್ಠಾನವಾಗಿಲ್ಲ. ಇದರ ನಡುವೆ ಇದೀಗ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ಕನ್ನಡವನ್ನು ಪೂರ್ಣ ಪ್ರಮಾಣದಲ್ಲಿ ಬಳಸುವಂತೆ ಸುತ್ತೋಲೆ ಹೊರಡಿಸಿದೆ.

ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಇಂದು (ಜೂನ್ 25) ಈ ಮಹತ್ವದ ಸುತ್ತೋಲೆ ಹೊರಡಿಸಿದ್ದು ಆಡಳಿತದಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸುವಂತೆ ಸೂಚಿಸಿದ್ದಾರೆ. ಒಂದು ವೇಳೆ ಸೂಚನೆಗಳನ್ನ ಉಲ್ಲಂಘಿಸಿದರೆ ಅಂತವರ ವಿರುದ್ಧ ವೈಯಕ್ತಿಕವಾಗಿ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!