ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಮುಂದುವರಿಯುವ ವಿಶ್ವಾಸವಿದೆ : ಚಲವಾದಿ ನಾರಾಯಣ ಸ್ವಾಮಿ

Picture of Savistara

Savistara

Bureau Report

ಯಾದಗಿರಿ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ

ಅವರು ಮುಂದುವರೆಯುತ್ತಾರೆ ಎಂಬ ವಿಶ್ವಾಸವಿದೆ. ಅವರೊಬ್ಬ ಕ್ರೀಯಾಶೀಲ ಅಧ್ಯಕ್ಷ ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.

ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷದ ನಾಯಕನ ಬದಲಾವಣೆ ಸೇರಿದಂತೆಯೇ ಯಾರ ಬದಲಾವಣೆ ಇಲ್ಲ. ಈ ಬಗ್ಗೆ ಏನೇ ಇದ್ದರೂ ಪಕ್ಷದ ಹೈಕಮಾಂಡ್ ನೋಡಿಕೊಳ್ಳುತ್ತದೆ. ಪಕ್ಷದ ಸಂಘಟನೆ ವಿಚಾರವಾಗಿ ದೆಹಲಿಗೆ ರಾಜ್ಯಾಧ್ಯಕ್ಷರು ಹೋಗಿ ಬರುತ್ತಾರೆ. ಅದಕ್ಕೆ ಬೇರೆ ಕಲ್ಪನೆ ಕಟ್ಟುವುದು ಬೇಡ ಎಂದರು.

2-3 ತಿಂಗಳಲ್ಲಿ ರಾಜ್ಯದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂಬ ಸಚಿವ ರಾಜಣ್ಣ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದರು.

ಇಲ್ಲಿನ ತಾಯಿ, ಮಕ್ಕಳ ಜಿಲ್ಲಾ ಸರ್ಕಾರಿಗೆ ಗುರುವಾರ ಮಧ್ಯಾಹ್ನ ಹಠಾತ್ತನೇ ಭೇಟಿ ಮಾಡಿ ಅಲ್ಲಿನ ಹದಗೆಟ್ಟ ವ್ಯವಸ್ಥೆ ಕಂಡು ಆಕ್ರೋಶ ವ್ಯಕ್ತಪಡಿಸಿ, ಮೊದಲು ಸರ್ಕಾರ ಈ ಆಸ್ಪತ್ರೆಗೆ ಚಿಕಿತ್ಸೆ ಕೊಡಿಸಲಿ ಎಂದು ವ್ಯಂಗ್ಯವಾಡಿದರು

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!