ರಾಜ್ಯ ಹಿಂದುಳಿದ ಆಯೋಗಕ್ಕೆ ಐವರು ಸದಸ್ಯರ ನೇಮಕಗೊಳಿಸಿ ಆದೇಶ

Picture of Savistara

Savistara

Bureau Report

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ

ಐವರು ಸದಸ್ಯರನ್ನು ನೇಮಿಸಿ ಸರ್ಕಾರ ಆದೇಶಿಸಿದೆ. ಈಗಾಗಲೇ ಮಧುಸೂದನ್ ನಾಯಕ್ ಅವರನ್ನು ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಆಯೋಗದ ಸದಸ್ಯರನ್ನು ನೇಮಕ ಮಾಡಲು ವಿಳಂಬವಾಗಿತ್ತು. ಇದೀಗ ರಾಜ್ಯ ಸರ್ಕಾರ ಐದು ಮಂದಿ ಸದಸ್ಯರನ್ನು ನೇಮಿಸಿ ಆದೇಶಿಸಿದೆ.

ಮೈಸೂರಿನ ಶಿವಣ್ಣಗೌಡ, ಧಾರವಾಡದ ಡಾ.ಸಿ.ಎಂ.ಕುಂದಗೋಳ, ಕಲಬುರ್ಗಿಯ ಚಂದ್ರಪ್ಪ, ರಾಮನಗರದ ಡಾ.ಜಿ.ಎನ್.ಶ್ರೀಕಂಠಯ್ಯ, ದಕ್ಷಿಣ ಕನ್ನಡದ ಪ್ರತಿಭಾ ಕುಲಾಯಿರನ್ನು ಆಯೋಗದ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ಹಿಂದುಳಿದ ವರ್ಗಗಳ ಜಾತಿ ಮರು ಸಮೀಕ್ಷೆ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ರಾಜಕೀಯ ತಿಕ್ಕಾಟಕ್ಕೆ ಕಾರಣವಾಗಿದ್ದ ಈ ಹಿಂದಿನ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಕಾಂಗ್ರೆಸ್‌ ಸರ್ಕಾರ ಕೈ ಬಿಟ್ಟಿದೆ. ಈ ಹಿನ್ನೆಲೆ ಹೊಸದಾಗಿ ಮರು ಸಮೀಕ್ಷೆ ಮಾಡಲು ತೀರ್ಮಾನಿಸಲಾಗಿದೆ

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!