ಐಎಸ್ ಎಸ್ ನಲ್ಲಿ ಗಗನಯಾತ್ರಿ ಶುಭಾಂಶು ಶುಕ್ಲಾ ಜೊತೆ ಪ್ರಧಾನಿ ಮೋದಿ ಸಂವಾದ

Picture of Savistara

Savistara

Bureau Report

ಪ್ರಧಾನಿ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್‌ಎಸ್‌)ದಲ್ಲಿರುವ ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಿದ್ದು, ಅದರ ನೇರ ಪ್ರಸಾರ ಇಲ್ಲಿದೆ. ಜೂನ್ 25 ರಂದು ಆಕ್ಸಿಯಮ್ -4 ಕಾರ್ಯಾಚರಣೆಯ ಭಾಗವಾಗಿ ಶುಭಾಂಶು ಶುಕ್ಲಾ, ಇತರ ಮೂವರು ಗಗನಯಾತ್ರಿಗಳೊಂದಿಗೆ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಸ್ಪೇಸ್‌ಎಕ್ಸ್‌ನ ಡ್ರ್ಯಾಗನ್ ಕ್ಯಾಪ್ಸುಲ್‌ನಲ್ಲಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿದ್ದು, ಯಶಸ್ವಿ ರಾಕೆಟ್ ಉಡಾವಣೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವರು ಎಕ್ಸ್​ ಪೋಸ್ಟ್​ ಮಾಡಿ ಅಭಿನಂದನೆ ಸಲ್ಲಿಸಿದ್ದರು. ಶುಭಾಂಶು ಶುಕ್ಲಾ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದು, 140 ಕೋಟಿ ಭಾರತೀಯರ ಆಶಯಗಳು, ನಿರೀಕ್ಷೆಗಳು ಮತ್ತು ಆಕಾಂಕ್ಷೆಗಳನ್ನು ಅವರು ತಮ್ಮೊಂದಿಗೆ ತೆಗೆದುಕೊಂಡು ಹೋಗಿದ್ದಾರೆ. ಶುಕ್ಲಾ ಮತ್ತು ಇತರ ಗಗನಯಾತ್ರಿಗಳಿಗೆ ಯಶಸ್ಸು ಸಿಗಲಿ ಎಂದು ಮೋದಿ ಎಕ್ಸ್ ಪೋಸ್ಟ್​ನಲ್ಲಿ ತಿಳಿಸಿದ್ದರು. ಅಮೆರಿಕದ ಫ್ಲೋರಿಡಾದಲ್ಲಿರುವ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಆಕ್ಸಿಯಮ್ 4 ಮಿಷನ್ ಉಡಾಯಿಸಲಾಯಿತು. ಈ ಕಾರ್ಯಾಚರಣೆಯನ್ನು ಭಾರತದ ಐಎಎಫ್ ಗ್ರೂಪ್ ಕ್ಯಾಪ್ಟನ್​ ಶುಭಾಂಶು ಶುಕ್ಲಾ ಮುನ್ನಡೆಸುತ್ತಿದ್ದಾರೆ. ಫಾಲ್ಕನ್ 9 ರಾಕೆಟ್‌ನಲ್ಲಿರುವ ಹೊಸ ಸ್ಪೇಸ್‌ಎಕ್ಸ್ ಡ್ರ್ಯಾಗನ್ ನೌಕೆಯ ಮೂಲಕ ಇಂಟರ್ನ್ಯಾಷನಲ್ ಸ್ಪೇಸ್ ಸ್ಟೇಷನ್​ಗೆ (ಐಎಸ್ಎಸ್) ಗಗನಯಾತ್ರಿಗಳು ಪ್ರಯಾಣಿಸಿದ್ದಾರೆ. ಕಾರ್ಯಾಚರಣೆಯ ನೇತೃತ್ವವನ್ನು ಯುಎಸ್ ಕಮಾಂಡರ್ ಪೈಗಿ ವಿಟ್ಸನ್ ವಹಿಸಿದ್ದು, ಮಿಷನ್ ಪೈಲಟ್ ಮತ್ತು ಹಂಗೇರಿಯನ್ ಗಗನಯಾತ್ರಿ ಟಿಬೋರ್ ಕಾಪು ಮತ್ತು ಸ್ಲಾವೋಸ್ ಉಜ್ನಾನ್ಸ್ಕಿ-ವಿಸ್ನಿವ್ಸ್ಕಿ ಮಿಷನ್ ಎಕ್ಸ್‌ಪರ್ಟ್ ಆಗಿ ತೆರಳಿದ್ದಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!