ಈ ಸರ್ಕಾರ 5 ವರ್ಷ ಬಂಡೆ ರೀತಿಯಲ್ಲಿರುತ್ತದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Picture of Savistara

Savistara

Bureau Report

ಮೈಸೂರು: ನಮ್ಮ ಸರ್ಕಾರ ಬಿದ್ದೋಗತ್ತೆ ಅಂತ ಸೋತ

ಗಿರಾಕಿಗಳು ಹೇಳುತ್ತಿದ್ದಾರೆ. ನಮ್ಮ ಸರ್ಕಾರ ಐದು ವರ್ಷ ಬಂಡೆ ರೀತಿ ಇರತ್ತೆ. 2028 ರಲ್ಲೂ ನಾವೇ ಗೆದ್ದು ಅಧಿಕಾರಕ್ಕೆ ಬರ್ತೀವಿ ಎಂದು ಘೋಷಿಸಿದ ಮುಖ್ಯಮಂತ್ರಿಗಳು ನೀರಾವರಿಗೆ ನಮ್ಮ ಈ ಸರ್ಕಾರ 25 ಸಾವಿರ ಕೊಟ್ಟಿದೆ. ಬೇರೆ ಯಾವ ಸರ್ಕಾರವಾದರೂ ಈ ಮಟ್ಟದ ಅನುದಾನ ಕೊಟ್ಟಿತ್ತಾ ಎಂದು ಮುಖ್ಯಮಂತ್ರಿ(CM) ಸಿದ್ದರಾಮಯ್ಯ ಪ್ರಶ್ನಿಸಿದರು.

ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನಗೂ, DCM ಶಿವಕುಮಾರ್ ಅವರಿಗೂ ಸರಿ ಇಲ್ಲ ಎಂದು ಬುರುಡೆ ಬಿಡುತ್ತಿದ್ದಾರೆ. ನಾನು ಮತ್ತು ಶಿವಕುಮಾ‌ರ್ ಇಬ್ಬರೂ ಒಟ್ಟಾಗಿ, ಗಟ್ಟಿಯಾಗಿದ್ದೀವಿ. ನಮ್ಮ ಸರ್ಕಾರವೂ ಐದು ವರ್ಷ ಗ್ಯಾರಂಟಿಯಾಗಿ ಗಟ್ಟಿಯಾಗಿ ಇರುತ್ತದೆ. 2028 ರಲ್ಲೂ ಗೆದ್ದು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಘೋಷಿಸಿದರು.

ಇದನ್ನೂ ಓದಿ:ಅಂಬೇಡ್ಕರ್ ಭವನಕ್ಕೆ ನಿವೇಶನ: ಸೂಕ್ತ ಕ್ರಮಕ್ಕೆ ಸೂಚನೆ

ಅಭಿವೃದ್ಧಿಗೆ ಹಣ ಇಲ್ಲ, ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಬುರುಡೆ ಬಿಡುತ್ತಿರುವ ಬಿಜೆಪಿಯವರು ನಾಡಿನ ಜನರಿಗೆ ಉತ್ತರಿಸಬೇಕು. ದಿವಾಳಿ ಆಗಿದ್ದರೆ 25 ಸಾವಿರ ಕೋಟಿ ರೂಪಾಯಿ ಎಲ್ಲಿಂದ ಬಂತು ಎಂದು ಪ್ರಶ್ನಿಸಿದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!