ದಂಡಿಗೆದರಲಿಲ್ಲ ದಾಳಿಗೆದರಲಿಲ್ಲ ಖಾಲಿ ಡಬ್ಬದ ಸದ್ದಿಗೆ ಹೆದರಲಾದೀತೆ? | ಆರೆಸ್ಸೆಸ್ ಬ್ಯಾನ್ ಪ್ರಿಯಾಂಕ ಖರ್ಗೆ ಹೇಳಿಕೆಗೆ ವಿಜಯೇಂದ್ರ ಟಾಂಗ್

Picture of Savistara

Savistara

Bureau Report

ಶತಮಾನ ಪೂರೈಸಿರುವ ಲಕ್ಷಾಂತರ ಸ್ವಯಂಸೇವಕರನ್ನು ಹೊಂದಿರುವ ರಾಷ್ಟ್ರದ ಹಾಗೂ ವಿಶ್ವದ ಏಕೈಕ ಮಹಾನ್ ದೇಶಭಕ್ತರ ಸಂಘಟನೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಎಂಬ ಪ್ರಖರ ಸತ್ಯವನ್ನು ಸಚಿವ ಪ್ರಿಯಾಂಕ ಖರ್ಗೆ ತಮ್ಮ ಹತಾಶೆಯ ಮನಸ್ಸಿನ ಬಾಗಿಲ ಕಿಂಡಿಯಿಂದ ಇಣುಕಿ ಮೊದಲು ನೋಡಲೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಅರೆಸೆಸ್ಸ್ ಸಂಘಟನೆ ಮಹಾನ್ ವೃಕ್ಷ, ಈ ವೃಕ್ಷವನ್ನು ಬೇರು ಸಮೇತ ಕಿತ್ತೊಗೆಯುತ್ತೇವೆಂದು ಶತಮಾನಗಳಿಂದಲೂ ವಿಕೃತ ಮನಸ್ಸಿನ ರಾಜಕೀಯ ಶಕ್ತಿಗಳು ವ್ಯರ್ಥ ಪ್ರಲಾಪ ಮಾಡುತ್ತಲೇ ಇವೆ, RSS ನ ರಂಬೆ-ಕೊಂಬೆಗಳನ್ನೂ ಕೊಂಕಿಸಲಾಗದವರ ಸೊಲ್ಲಡಗಿ ದಿಕ್ಕು ಕಾಣದಂತೆ ಧೂಳಿಪಟವಾಗಿವೆ, ಈ ಸಾಲಿಗೆ ಕಾಂಗ್ರೆಸ್ ಸೇರ್ಪಡೆಯಾಗಿರುವುದರಿಂದಲೇ ರಾಷ್ಟ್ರದ ರಾಜಕೀಯ ಭೂಪಟದಲ್ಲಿ ದುರ್ಬೀನು ಹಾಕಿ ಹುಡುಕುವ ದಯನೀಯ ಪರಿಸ್ಥಿತಿಯಲ್ಲಿ ಅಸ್ತಿತ್ವಕ್ಕಾಗಿ ತಿಣುಕಾಡುತ್ತಿದೆ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ಮಾತಿರಲಿ, ಭವಿಷ್ಯದಲ್ಲಿ ಕಾಂಗ್ರೆಸ್ ಅಸ್ತಿತ್ವ ಉಳಿಯುತ್ತದೆಯೇ ಎಂಬ ಬಗ್ಗೆ ಪ್ರಿಯಾಂಕ್ ಖರ್ಗೆ ತಲೆಕೆಡಿಸಿಕೊಳ್ಳಲಿ. “ದಂಡಿಗೆದರಲಿಲ್ಲ ದಾಳಿಗೆದರಲಿಲ್ಲ ಖಾಲಿ ಡಬ್ಬದ ಸದ್ದಿಗೆ ಹೆದರಲಾದೀತೇ?” ಎಂಬ ಮಾತನ್ನು ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ನೆನಪಿಸಬಯಸುತ್ತೇನೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!