ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಐಪಿಎಸ್‌ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದುಗೊಳಿಸಿದ ಸಿಎಟಿ

Picture of Savistara

Savistara

Bureau Report

ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದ ರಾಜ್ಯ ಸರಕಾರಕ್ಕೆ ಹಿನ್ನಡೆಯಾಗಿದೆ. ತಮ್ಮನ್ನು ಅಮಾನತು ಮಾಡಿದ್ದ ಸರಕಾರದ ಆದೇಶ ರದ್ದು ಕೋರಿ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಬಿ.ಕೆ.ಶ್ರೀವಾತ್ಸವ, ನ್ಯಾಸಂತೋಷ್ ಮೆಹ್ರಾ ಅವರಿದ್ದ ಪೀಠ ಸರಕಾರದ ಆದೇಶ ರದ್ದುಗೊಳಿಸಲು ಆದೇಶ ಹೊರಡಿಸಿದೆ.ಅಲ್ಲದೆ ಹಿಂದಿನ ಎಲ್ಲಾ ಭತ್ಯೆ ಸೌಲಭ್ಯ ಒದಗಿಸಲು ಸಿಎಟಿ ಆದೇಶಿದೆ. ವಿಕಾಸ್ ಕುಮಾರ್ ಪರ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ವಾದಿಸಿದ್ದರು. ಅಮಾನತು ರದ್ದುಪಡಿಸಿ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಆದೇಶಿಸಿದೆ. ಆ ಮೂಲಕ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಗೆ ರಿಲೀಫ್ ಸಿಕ್ಕಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ 11 ಜನರ ಸಾವು ಪ್ರಕರಣ ಸಂಬಂಧ ಅಮಾನತಾಗಿದ್ದ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತರಾಗಿದ್ದ ವಿಕಾಸ್ ಕುಮಾ‌ರ್ ಅವರು ರಾಜ್ಯ ಸರಕಾರದ ಕ್ರಮವನ್ನು ಪ್ರಶ್ನಿಸಿ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ)ಗೆ ಅರ್ಜಿ ಸಲ್ಲಿಸಿದ್ದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!