ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಂದು ಹಿನ್ನಡೆ! ವಾಲ್ಮೀಕಿ ಹಗರಣ SIT ರದ್ದು ಮಾಡಿ CBI ಗೆ ವಹಿಸಿ ಹೈಕೋರ್ಟ್ ಆದೇಶ

Picture of Savistara

Savistara

Bureau Report

ಬೆಂಗಳೂರು: ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ (Valmiki Corporation Scam) ನಡೆದಿದೆ ಎನ್ನಲಾದ 187 ಕೋಟಿ ರೂಪಾಯಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಮಾಜಿ ಸಚಿವ ಬಿ ನಾಗೇಂದ್ರ (B Nagendra) ಹಾಗೂ ಕರ್ನಾಟಕ ರಾಜ್ಯ ಸರ್ಕಾರಕ್ಕೆ (State Govt) ಬಿಗ್ ಶಾಕ್ ನೀಡಿದೆ. ಅಂದಹಾಗೆ ಈ ಪ್ರಕರಣದ ತನಿಖೆಯನ್ನು ಸದ್ಯ ಸಿಬಿಐಗೆ ವಹಿಸಿ ಹೈಕೋರ್ಟ್ (High Court) ಆದೇಶ ಹೊರಡಿಸಿದೆ.

ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ, ಹೈಕೋರ್ಟ್ SIT ತನಿಕೆ ರದ್ದುಪಡಿಸಿ ಸಿಬಿಐ ತನಿಖೆಗೆ ಹಸ್ತಾಂತರಿಸಿದೆ. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ ತೀರ್ಪು ನೀಡಿ ಆದೇಶಿಸಿದೆ. ಎಸ್‌ಐಟಿ ತನಿಖೆ ರದ್ದುಗೊಳಿಸಿ ಸಿಬಿಐ ತನಿಖೆಗೆ ವಹಿಸಬೇಕೆಂದು ರಾಜ್ಯ ಬಿಜೆಪಿ ನಾಯಕರು ಸಲ್ಲಿಸಿದ್ದ ಅರ್ಜಿ ಮಾನ್ಯ ಹೈಕೋರ್ಟ್ ಮಾ್ಯ ಮಾಡಿದೆ.

ಸದ್ಯ, ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ 187 ಕೋಟಿ ರೂಪಾಯಿ ಅವ್ಯವಹಾರ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಕೋರಿದ್ದ ರಾಜ್ಯ ಬಿಜೆಪಿ ನಾಯಕರು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದೆ. ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸೇರಿ ಮತ್ತಿತರರು ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ಮಾನ್ಯ ಮಾಡಿದೆ.

ಏನಿದು ಮಹರ್ಷಿ ವಾಲ್ಮೀಕಿ ಬಹುಕೋಟಿ ಹಗರಣ?

ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಅಧೀಕ್ಷಕ ಚಂದ್ರಶೇಖರನ್.ಪಿ (52) ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಕೂಡ ನೀಡಿದ್ದರು. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಮುಖ್ಯ ಖಾತೆಯಲ್ಲಿ ಹಿಂದಿನ ಸಾಲಿನ ಹಾಗೂ 2024-25 ನೇ ಸಾಲಿನ ಯೋಜನೆಗಳಿಗೆ ಮೀಸಲಿಟ್ಟ 187 ಕೋಟಿ ಮೊತ್ತದಲ್ಲಿ 88 ಕೋಟಿ ಹಣವನ್ನು ನಿಗಮದ ಅಧ್ಯಕ್ಷರ ಗಮನಕ್ಕೂ ಬಾರದೇ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಎಂ.ಜಿ ರಸ್ತೆಯ ಶಾಖೆಯ ಅನಧಿಕೃತ ಖಾತೆಗೆ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು.

ಬ್ಯಾಂಕ್‌ನವರು ಫೆ. 26ರಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಲೆಕ್ಕಾಧಿಕಾರಿಗಳ ಸಹಿ ಪಡೆದು ನಿಗಮದ ಖಾತೆಯಿಂದ ಬೇರೆ ಬೇರೆ ಖಾತೆಗಳಿಗೆ ಹಂತ-ಹಂತವಾಗಿ 187.33 ಕೋಟಿ ರೂ. ವರ್ಗಾವಣೆ ಮಾಡಿದ್ದರು. ಮಾರ್ಚ್ 4ರಂದು 25 ಕೋಟಿ ರೂಪಾಯಿ, ಮಾ. 6ರಂದು 25 ಕೋಟಿ ರೂಪಾಯಿ, ಮಾ. 21ರಂದು 44 ಕೋಟಿ ರೂಪಾಯಿ, ಮಾರ್ಚ್ 22ರಂದು 43.33 ಕೋಟಿ ರೂ. ಹಾಗೂ ಮೇ 21ರಂದು 50 ಕೋಟಿ ರೂ. ವರ್ಗಾವಣೆಯಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ವಾಲ್ಮೀಕಿ ನಿಗಮದ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿತ್ತು. ಸರ್ಕಾರದ ಪೂರ್ವ ಅನುಮತಿ ಪಡೆದು ಬ್ಯಾಂಕ್ ಅಧಿಕಾರಿಗಳ ವಿರುದ್ಧ FIR ಮಾಡಲಾಗಿತ್ತು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಬ್ಯಾಂಕ್ ಎಂಡಿ ಹಾಗೂ ಸಿಇಓ ಹಾಗೂ ಎಲ್ಲಾ ನಿರ್ದೇಶಕರ ಮೇಲೆ ಎಫ್‌ಐಆರ್‌ ದಾಖಲಾಗಿತ್ತು. 6 ಜನ ಬ್ಯಾಂಕ್ ಅಧಿಕಾರಿಗಳ ಮೇಲೆ ಪ್ರಕರಣ ದಾಖಲಾಗಿತ್ತು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!