ಸಿಎಂ ಕಾರ್ಯಕ್ರಮದಲ್ಲಿ ಅಪಮಾನ – ಸ್ವಯಂ ನಿವೃತ್ತಿಗೆ ಮುಂದಾದ ಎಎಸ್‌ಪಿ ಬರಮಣ್ಣಿ

Picture of Savistara

Savistara

Bureau Report

ಧಾರವಾಡ: ಧಾರವಾಡ ಎಎಸ್‌ಪಿ (Dharwad ASP) ನಾರಾಯಣ ಬರಮಣ್ಣಿ ಅವರು ಸ್ವಯಂ ನಿವೃತ್ತಿಗೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆಯೇ ಸಿಎಂ ಸಿದ್ದರಾಮಯ್ಯ (Siddaramaiah) ಅವರಿಂದ ಅಧಿಕಾರಿ ಅಪಮಾನಕ್ಕೆ ಒಳಗಾಗಿದ್ದರು. ಬೆಳಗಾವಿ ಸಮಾರಂಭದಲ್ಲಿ ಅಧಿಕಾರಿ ಮೇಲೆ ಸಿಎಂ ಕಪಾಳಮೋಕ್ಷಕ್ಕೆ ಮುಂದಾಗಿದ್ದರು. ಈ ಸನ್ನಿವೇಶದಿಂದ ಅಧಿಕಾರಿ ನೊಂದುಕೊಂಡಿದ್ದರು. ಅದೇ ಕಾರಣಕ್ಕೆ ಈ ನಿರ್ಧಾರ ಕೈಗೊಂಡಿದ್ದಾರೆಯೇ ಎಂಬ ಪ್ರಶ್ನೆ ಮೂಡಿದೆ.

ಸ್ವಯಂಪ್ರೇರಿತ ನಿವೃತ್ತಿಗೆ ನಾರಾಯಣ ಅವರು ಅರ್ಜಿ ಸಲ್ಲಿಸಿದ್ದಾರೆ. ಹಿರಿಯ ಅಧಿಕಾರಿಗಳು ಸಿಎಂ ಸಮ್ಮುಖದಲ್ಲಿ ಅಧಿಕಾರಿಯ ಮನವೊಲಿಸಲು ಪ್ರಯತ್ನಿಸಿದ್ದಾರೆ. ಮನವೊಲಿಕೆಯಿಂದ ಅಧಿಕಾರಿ ಬರಮಣ್ಣಿ ಅವರು ಸ್ವಲ್ಪಮಟ್ಟಿಗೆ ಶಾಂತವಾಗಿದ್ದಾರೆ.

ತಮಗಾದ ಅವಮಾನಕ್ಕೆ ಬರಮಣ್ಣಿ ಅವರು ನೊಂದುಕೊಂಡಿದ್ದರು. ಹೀಗಾಗಿ, ಕೆಲಸದಿಂದಲೇ ಸ್ವಯಂ ನಿವೃತ್ತಿಗೆ ಮುಂದಾಗಿದ್ದರು. ಅಧಿಕಾರಿಯ ನಡೆಯಿಂದ ಸರ್ಕಾರಕ್ಕೆ ಮುಜುಗರ ಆಗಿದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!