ಭಾಗ್ಯನಗರವಾದ ಬಾಗೇಪಲ್ಲಿ, ಗ್ರಾಮಾಂತರ ಇನ್ನು ಬೆಂಗಳೂರು ಉತ್ತರ: ಸಂಪುಟ ನಿರ್ಧಾರ

Picture of Savistara

Savistara

Bureau Report

ನಂದಿ ಬೆಟ್ಟ (ಚಿಕ್ಕಬಳ್ಳಾಪುರ): ಬೆಂಗಳೂರು ಗ್ರಾಮಾಂತರಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದೂ, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಹೆಸರನ್ನು ಭಾಗ್ಯನಗರ ಎಂದು ಬದಲಾಯಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಸಚಿವ ಸಂಪುಟ ಸಭೆಯ ಇತರ ಪ್ರಮುಖ ನಿರ್ಣಯಗಳು ಇಲ್ಲಿವೆ

  • ಪ್ರತಿ ಜಿಲ್ಲೆಯಲ್ಲಿ ಕಾರ್ಮಿಕ ಇಲಾಖೆಯಿಂದ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ ಆರಂಭ. ಇದಕ್ಕೆ ಖರ್ಚು ₹1125 ಕೋಟಿ ಖರ್ಚು. ಕಾರ್ಮಿಕರು ಎಲ್ಲಿ ಹೆಚ್ಚು ಇದ್ದಾರೊ ಅಲ್ಲಿ ವಸತಿ ಶಾಲೆ ನಿರ್ಮಾಣ.
  • ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಎರಡು ವಸತಿ ತರಬೇತಿ ಕೇಂದ್ರ (IRS, IPS, IAS) ನಿರ್ಮಾಣ. ಇದಕ್ಕೆ ₹10 ಕೋಟಿ ಮೀಸಲು.
  • ಬೆಂಗಳೂರು ನಗರ ವಿವಿಗೆ ದಿವಂಗತ ಪ್ರಧಾನಿ ಮನಮೋಹನ್ ಸಿಂಗ್ ಹೆಸರು ನಾಮಕರಣಕ್ಕೆ ತೀರ್ಮಾನ.
  • ಹೊಸ ತಾಲ್ಲೂಕುಗಳಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳ ನಿರ್ಮಾಣ.
News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!