ನಾನೇ 5 ವರ್ಷ ಸಿಎಂ, ನಿಮಗ್ಯಾಕೆ ಅನುಮಾನ ಸಿಎಂ ಸಿದ್ದರಾಮಯ್ಯ

Picture of Savistara

Savistara

Bureau Report

ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದೇನೆ. ಈ ಬಗ್ಗೆ ಅನುಮಾನ ಬರುವಂತದ್ದು ಏನಿದೆ? Bharatiya Janata Party (BJP) ನಮ್ಮ ಹೈಕಮಾಂಡ್ ಅಲ್ಲ, ಅವರು ಹೇಳಿದಂಗೆಲ್ಲ ನಮ್ಮಲ್ಲಿ ನಡೆಯಲ್ಲ. ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ BJP Karnataka ಹಗಲುಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ ನಂಬುತ್ತಾರೆ, ಸತ್ಯವನ್ನಲ್ಲ. ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿರುವ ಬಿಜೆಪಿಯವರಿಗೆ ಸತ್ಯ ಹೇಳಿ ಗೊತ್ತೇ ಇಲ್ಲ. ಅವರು ನಂಬುತ್ತಾರೋ, ಬಿಡುತ್ತಾರೆ ನಾವೆಲ್ಲಾ ಒಟ್ಟಾಗಿದ್ದೇವೆ. ನಮ್ಮ ಸರ್ಕಾರ ಬಂಡೆಯಂತೆ ಐದು ವರ್ಷ ಆಡಳಿತ ನಡೆಸಲಿದೆ.ಬಿಜೆಪಿ ಅಧಿಕಾರದಲ್ಲಿದ್ದಾಗ ಏನು ಸಾಕ್ಷಿಗುಡ್ಡೆಯನ್ನು ಬಿಟ್ಟುಹೋಗಿದ್ದಾರೆ? ಅವರು ನೀರಾವರಿ, ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ, ಶಿಕ್ಷಣ, ಆರೋಗ್ಯ ಕ್ಷೇತ್ರಗಳಲ್ಲಿ ಏನು ಮಾಡಿದ್ದಾರೆ? ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿತ್ತು. ಎಚ್.ಡಿ. ಕುಮಾರಸ್ವಾಮಿ ಅವರು ಒಂದು ವರ್ಷ ಎರಡು ತಿಂಗಳು ಸಮ್ಮಿಶ್ರ ಸರ್ಕಾರದಲ್ಲಿ ಅಧಿಕಾರದಲ್ಲಿದ್ದರು. ಏನು ಮಾಡಿದ್ದಾರೆ? ಏನೂ ಮಾಡದೇ ಸುಳ್ಳು ಹೇಳಿಕೊಂಡು ಜನರನ್ನು ತಪ್ಪುದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿದ್ದಾರೆ.2 ವರ್ಷದ ಸರ್ಕಾರದ ಸಾಧನಾ ಸಮಾವೇಶದಲ್ಲಿ ಮಳೆಯಿದ್ದರೂ ಸುಮಾರು ಮೂರು ಲಕ್ಷಕ್ಕಿಂತ ಹೆಚ್ಚು ಜನ ಸೇರಿದ್ದರು. ಜನರು ಸರ್ಕಾರದ ಪರವಾಗಿ ಸುಮ್ಮನೆ ಬರುತ್ತಾರೆಯೇ? ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!