ಕೊಡಗಿನಲ್ಲಿ ಬಾಂಗ್ಲಾ ನುಸುಳುಕೋರರ ಆತಂಕ | ಕಾರ್ಮಿಕರ ಮೇಲೆ ನಿಗಾ ವಹಿಸಲು ಎಸ್ಪಿ ಸೂಚನೆ

Picture of Savistara

Savistara

Bureau Report

ಕಳೆದ ಹಲವು ತಿಂಗಳಿನಿಂದ ಕೊಡಗು ಜಿಲ್ಲೆಗೆ ಆಗಮಿಸುತ್ತಿರುವ ಅಸ್ಸಾಂ ಮೂಲದ ಕಾರ್ಮಿಕರ ಸಂಖ್ಯೆ ಹೆಚ್ಚಾಗಿದ್ದು, ಈ ಪೈಕಿ ಕೆಲವು ಬಾಂಗ್ಲಾ ನುಸುಳುಕೋರರು ಇದ್ದಾರೆ ಅನ್ನೋ ಶಂಕೆ ವ್ಯಕ್ತವಾಗಿದೆ.ಹೌದು. ಕೊಡಗು ಜಿಲ್ಲೆಯ ಮಡಿಕೇರಿ, ಸುಂಟಿಕೊಪ್ಪ, ಕುಶಾಲನಗರ, ವಿರಾಜಪೇಟೆ, ಗೋಣಿಕೊಪ್ಪಲು, ನಾಪೋಕ್ಲು ಸೇರಿದಂತೆ ಕೊಡಗಿನ ಪ್ರಮುಖ ಪಟ್ಟಣಗಳಲ್ಲಿ ನಡೆಯುವ ವಾರದ ಸಂತೆಗಳಲ್ಲಿ ಹೊಸ ಮುಖಗಳೇ ಹೆಚ್ಚಾಗಿ ಕಂಡುಬರುತ್ತಿವೆ. ಸಂತೆಗಳಲ್ಲಿ ವ್ಯಾಪಾರ ಮಾಡುವುದರಿಂದ ಆರಂಭಿಸಿ ಹೋಂ ಸ್ಟೇ, ರೆಸಾರ್ಟ್ ಗಳಲ್ಲಿ ರೂಮ್ ಬಾಯ್ ತನಕವೂ ಹೊರ ರಾಜ್ಯದ ಕಾರ್ಮಿಕರೇ ಹೆಚ್ಚಾಗಿ ಕಂಡುಬರುತ್ತಿದ್ದಾರೆ. ಇತ್ತೀಚೆಗೆ ಕೆಲವು ಅಪರಾಧ ಪ್ರಕರಣಗಳಲ್ಲೂ ಹೊರ ರಾಜ್ಯದವರೇ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ನಿಗಾ ವಹಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಕೊಡಗಿಗೆ ಬರುವ ವಲಸೆ ಕಾರ್ಮಿಕರು ಜಿಲ್ಲಾದ್ಯಂತ ಚದುರಿ ಹೋಗುತ್ತಿದ್ದಾರೆ. ಇದರಿಂದ ಅಕ್ರಮ ವಲಸಿಗರನ್ನು ಪತ್ತೆ ಮಾಡುವುದು ಕಷ್ಟವಾಗುತ್ತಿದೆ. ಹೀಗಾಗಿ ಕೆಲಸ ನೀಡುವ ಕಾಫಿ ತೋಟದ ಮಾಲೀಕರು, ಕಾರ್ಮಿಕರನ್ನು ಕರೆ ತರುವ ದಲ್ಲಾಳಿಗಳು ಆಯಾ ಕಾರ್ಮಿಕರ ಪೂರ್ವಾಪರ ವಿಚಾರಿಸಿ ಬಳಿಕ ಕೆಲಸಕ್ಕೆ ನೇಮಿಸಿಕೊಳ್ಳುವಂತೆ ಎಚ್ಚರಿಸಿದ್ದಾರೆ.ಒಂದು ವೇಳೆ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡುವಂತೆ ಕೊಡಗು ಪೊಲೀಸ್ ಅಧೀಕ್ಷಕರಾದ ರಾಮರಾಜನ್ ಮನವಿ ಮಾಡಿದ್ದಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!