ರಾಜ್ಯಾಧ್ಯಕ್ಷರನ್ನಾಗಿ ಯಾರನ್ನೂ ನೇಮಿಸಿದರೂ ನಮ್ಮ ಒಪ್ಪಿಗೆಯಿದೆ: ಕುಮಾರ ಬಂಗಾರಪ್ಪ

Picture of Savistara

Savistara

Bureau Report

ಬೆಂಗಳೂರು: ‘ಪಕ್ಷದ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಯಾರನ್ನು ನೇಮಿಸಿದರೂ ನಮ್ಮ ಸಹಕಾರ ಇದೆ’ ಎಂದು ಬಿಜೆಪಿ ನಾಯಕ ಕುಮಾ‌ರ್ ಬಂಗಾರಪ್ಪ ಹೇಳಿದ್ದಾರೆ.

‘ಇತರ ರಾಜ್ಯಗಳಲ್ಲಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿದೆ. ನಮ್ಮ ರಾಜ್ಯದಲ್ಲೂ ಅಧ್ಯಕ್ಷರ ಆಯ್ಕೆ ಸದ್ಯದಲ್ಲೇ ನಡೆಯಲಿದೆ. ವರಿಷ್ಠರು ಯಾರನ್ನು ನೇಮಿಸಿದರೂ ಅದಕ್ಕೆ ನಮ್ಮ ಒಪ್ಪಿಗೆ ಇದೆ. ಅವರ ತೀರ್ಮಾನಕ್ಕೆ ಬದ್ಧ’ ಎಂದು ಅವರು ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿ ತಿಳಿಸಿದರು.’ಹಾಲಿ ಅಧ್ಯಕ್ಷರು ಚುನಾವಣೆ ಮೂಲಕ ಆಯ್ಕೆ ಆದವರಲ್ಲ. ಅವರಿಗೆ ಯಾವುದೇ ಪ್ರಮಾಣ ಪತ್ರವನ್ನೂ ಕೊಟ್ಟಿಲ್ಲ. ಅವರು ಹಂಗಾಮಿ ಅಧ್ಯಕ್ಷರಷ್ಟೇ. ಈಗ ಮಾತನಾಡುವ ಸಮಯ ಹೀಗಾಗಿ ಮಾತನಾಡಿದ್ದೇವೆ’ ಎಂದು ಅವರು ಹೇಳಿದರು.

ನಮ್ಮ ಹೋರಾಟಕ್ಕೆ ಗೆಲುವು:

‘ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಸಿಬಿಐಗೆ ವಹಿಸಬೇಕು ಎಂದು ನಾವು ನ್ಯಾಯಾಲಯದ ಮೆಟ್ಟಿಲು ಹತ್ತಿದೆವು. ಅಂತಿಮವಾಗಿ ನಮ್ಮ ಹೋರಾಟಕ್ಕೆ ಗೆಲುವು ಸಿಕ್ಕಿದೆ’ ಎಂದು ಅವರು ಹೇಳಿದರು.’ಪ್ರಕರಣವನ್ನು ಸಿಬಿಐಗೆ ಕೊಟ್ಟ ತಕ್ಷಣ ಎಲ್ಲ ಮುಗಿದಿಲ್ಲ. ಈಗ ಆರಂಭ ಅಷ್ಟೇ, ವಾಲ್ಮೀಕಿ ಸಮುದಾಯಕ್ಕೆ ಸೇರಬೇಕಾದ ಜನರ ತೆರಿಗೆ ಹಣ ಮತ್ತು ದುಡಿಮೆಯ ಹಣ ದುರುಪಯೋಗ ಆಗಿದೆ. ನಿಗಮದ ಹಣ ಚುನಾವಣೆಗೆ ಬಳಕೆಯಾಗಿದೆ. ಬಳಸಿಕೊಂಡವರಿಗೂ ತಕ್ಕ ಶಾಸ್ತಿ ಆಗಬೇಕು. ಸಿಬಿಐಗೆ ಒಪ್ಪಿಸಬೇಕು ಎಂದು ಬಿಜೆಪಿ ಪರವಾಗಿ ಅರವಿಂದ ಲಿಂಬಾವಳಿ, ರಮೇಶ ಜಾರಕಿಹೊಳಿ, ಬಸನಗೌಡ ಪಾಟೀಲ ಯತ್ನಾಳ ಮತ್ತು ನಾನು ಸಹಿ ಹಾಕಿ ಪ್ರಕರಣ ದಾಖಲಿಸಿದ್ದೆವು’ ಎಂದು ಕುಮಾ‌ರ್ ಬಂಗಾರಪ್ಪ ತಿಳಿಸಿದರು.’ಈ ಹಗರಣದಲ್ಲಿ ವಾಲ್ಮೀಕಿ ಸಮಾಜದ ಜನರಿಗೆ ನ್ಯಾಯ ಸಿಗಬೇಕಾಗಿದೆ. ಪಕ್ಷದಿಂದ ಇನ್ನಷ್ಟು ಸಹಕಾರ ಸಿಕ್ಕಿದ್ದರೆ, ಈ ಪ್ರಕರಣವನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಒಯ್ಯಲು ಸಾಧ್ಯವಿತ್ತು. ಪಕ್ಷದೊಳಗಿನ ಗೊಂದಲದಿಂದ ಉನ್ನತ ಮಟ್ಟಕ್ಕೆ ಹೋಗಲು ಸಾಧ್ಯವಾಗಲಿಲ್ಲ’ ಎಂದು ಕುಮಾ‌ರ್ ಹೇಳಿದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!