ಸಿರಿಬಾಗಿಲು ಗ್ರಾಮ ಗುಂಡ್ಯ ತೋಟ ಕಂದಾಯ ಇಲಾಖೆ ಸರ್ವೇ ಕಾರ್ಯ |ರೈತರು,ಪಂಚಾಯತ್ ಅಧ್ಯಕ್ಷರು, ಶಾಸಕರ ಗಮನಕ್ಕೆ ತಂದು ಜಂಟಿ ಸರ್ವೇ ನಡೆಸುವಂತೆ ಕಿಶೋರ್ ಶಿರಾಡಿ ಒತ್ತಾಯ

Picture of Savistara

Savistara

Bureau Report

ಸಿರಿಬಾಗಿಲು ಗ್ರಾಮದ ಗುಂಡ್ಯದಲ್ಲಿ ಜು 03 ರಂದು ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯವರು ಜಂಟಿ ಸರ್ವೆ ಕಾರ್ಯವನ್ನು ನಡೆಸುವ ಸಂದರ್ಭದಲ್ಲಿ ಸರ್ವೆ ನಡೆಸುವ ಸರ್ವೆ ನಂಬರಿನ ರೈತರಿಗೆ ಪಂಚಾಯತ್ ಅಧ್ಯಕ್ಷರಿಗೆ ಆ ಕ್ಷೇತ್ರದ ಶಾಸಕರ ಗಮನಕ್ಕೆ ತಂದು ಜಂಟಿ ಸರ್ವೆ ನಡೆಸಬೇಕೆಂದು ಮಲೆನಾಡು ಹಿತರಕ್ಷಣ ವೇದಿಕೆಯ ಸಂಚಾಲಕರಾದ ಕಿಶೋರ್ ಶಿರಾಡಿ ರವರು ಆಗ್ರಹಿಸಿದರು. ಅನೇಕ ಪ್ರಶ್ನೆಗಳನ್ನು ಕೇಳಲಾಗಿದ್ದು ಪ್ರಶ್ನೆಗಳಿಗೆ ಇಲಾಖಾಧಿಕಾರಿಗಳು ಸಮರ್ಪಕವಾಗಿ ಉತ್ತರಿಸಲು ವಿಫಲರಾದರು. ಮತ್ತು ಮುಂದಿನ ಹಂತಗಳಲ್ಲಿ ನಕಾಶೆ ಮತ್ತು ತತ್ಸಂಬಂಧಿ ಇಲಾಖೆಯ ವರದಿಗಳನ್ನು ಸಾರ್ವಜನಿಕರ ಮುಂದಿಟ್ಟು ಕ್ರಮ ಕೈಗೊಳ್ಳಲಾಗುವುದೆಂದು ಹೇಳಿದರು ಮತ್ತು ಸರ್ವೆ ಕಾರ್ಯವನ್ನು ಮಾಡಲು ಅವಕಾಶ ಮಾಡಿಕೊಡಲಾಯಿತು. ಈ ಸಂದರ್ಭ ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ಪ್ರಮುಖರಾದ ಕಿಶೋರ್ ಶಿರಾಡಿ ,ದಾಮೋದರ್ ಗುಂಡ್ಯಾ ಪ್ರಕಾಶ್ ಗುಂಡ್ಯ ಮತ್ತಿತರರು ಉಪಸ್ಥಿತರಿದ್ದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!