ತೆಲಂಗಾಣ ಔಷಧ ಕಾರ್ಖಾನೆ ಸ್ಫೋಟ: ಮೃತರ ಸಂಖ್ಯೆ 40ಕ್ಕೆ ಏರಿಕೆ

Picture of Savistara

Savistara

Bureau Report

ಹೈದರಾಬಾದ್‌: ಇಲ್ಲಿನ ಸಂಗಾರೆಡ್ಡಿ ಜಿಲ್ಲೆಯ ಸಿಗಾಚಿ ಔಷಧ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಪೋಟದಲ್ಲಿ ಮತ್ತೊಬ್ಬರು ಮೃತಪಟ್ಟಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉತ್ತರ ಪ್ರದೇಶದ 48 ವರ್ಷದ ವ್ಯಕ್ತಿ ಶನಿವಾರ ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.ಶನಿವಾರ ಬೆಳಿಗ್ಗೆ ವೇಳೆಗೆ 19 ಜನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಂಗಾರೆಡ್ಡಿ ಜಿಲ್ಲಾ ಹೆಚ್ಚುವರಿ ಜಿಲ್ಲಾಧಿಕಾರಿ ಚಂದ್ರಶೇಖರ್ ಬಡಗು ತಿಳಿಸಿದ್ದಾರೆ.ದುರಂತ ಸಂಭವಿಸಿದ ವೇಳೆ(ಜೂನ್ 30) 143 ಮಂದಿ ಕೆಲಸ ಮಾಡುತ್ತಿದ್ದರು. ಈ ಪೈಕಿ 61 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದರು. 12 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಬಿಡುಗಡೆಯಾಗಿದ್ದಾರೆ. ಉಳಿದ 9 ಮಂದಿ ಈಗಲೂ ಕಣ್ಮರೆಯಾಗಿದ್ದಾರೆ. ಅವರನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!