ಆರ್‌ಎಸ್‌ಎಸ್‌ ನಿಷೇಧಿಸಬೇಕೆಂದು ನಾವ್ಯಾರೂ ಹೇಳಿಲ್ಲ: ಸಚಿವ ಎನ್‌. ಚಲುವರಾಯಸ್ವಾಮಿ

Picture of Savistara

Savistara

Bureau Report

ಬೆಂಗಳೂರು: ‘ಆರ್‌ಎಸ್‌ಎಸ್ ನಿಷೇಧಿಸಬೇಕೆಂದುಮುಖ್ಯಮಂತ್ರಿಯಾಗಲಿ, ನಾನಾಗಲಿ ಎಲ್ಲೂ ಹೇಳಿಲ್ಲ’ ಎಂದು ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆರ್‌ಎಸ್‌ಎಸ್ ಚಟುವಟಿಕೆ ಆರೋಗ್ಯಕರವಾಗಿ ಇರಲಿ ಎಂಬ ಉದ್ದೇಶದಿಂದ, ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್ಎಸ್ ನಿಷೇಧಿಸುತ್ತೇವೆಂದು ಹೇಳಿರಬಹುದು’ ಎಂದರು.“ಮುಖ್ಯ ಕಾರ್ಯದರ್ಶಿ ವಿರುದ್ಧ ವಿಧಾನ ಪರಿಷತ್ ಬಿಜೆಪಿ ಸದಸ್ಯ ಎನ್. ರವಿಕುಮಾ‌ರ್ ಅವರ ಹೇಳಿಕೆ ಯಾರೂ ಒಪ್ಪುವಂಥದ್ದಲ್ಲ. ಆದರೆ, ಈ ಹೇಳಿಕೆಯನ್ನು ಬಿಜೆಪಿ ನಾಯಕರಾದ ಪ್ರಲಾದ ಜೋಶಿ, ಬಿ.ವೈ. ವಿಜಯೇಂದ್ರ, ಆರ್. ಅಶೋಕ ಖಂಡಿಸಿಲ್ಲ. ಒಬ್ಬ ಮಹಿಳಾ ಅಧಿಕಾರಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಕಾರಣಕ್ಕೆ ಪ್ರಿಯಾಂಕ್ ಖರ್ಗೆ ಆ ರೀತಿ ಹೇಳಿರಬಹುದು’ ಎಂದು ಸ್ಪಷ್ಟಪಡಿಸಿದರು.’ಆರ್‌ಎಸ್‌ಎಸ್‌ ವಿಚಾರಕ್ಕೆ ಬಂದರೆ ಭಸ್ಮ ಆಗುತ್ತಾರೆ’ ಎಂಬ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಚಲುವರಾಯಸ್ವಾಮಿ, ‘ನಾವೆಲ್ಲ ಭಸ್ಮ ಆಗಲು ಅವರೇನು ಶಿವನಾ? ಅಥವಾ ವಿಷ್ಣುನಾ? ಅಂಥ ಶಕ್ತಿಯನ್ನು ಸದಾನಂದಗೌಡರು ಪಡೆದುಕೊಂಡಿದ್ದರಾ? ಗಟ್ಟಿ ಧ್ವನಿಯಲ್ಲಿ ಹೇಳುವುದು ತಪ್ಪಲ್ಲ. ಆದರೆ, ಮಹಿಳೆಯರ ಬಗ್ಗೆ ಅವಹೇಳನವಾಗಿ ಮಾತನಾಡಿದರೆ ಹೇಗೆ’ ಎಂದು ಪ್ರಶ್ನಿಸಿದರು.

‘ಮೇಕೆದಾಟು ಯೋಜನೆ ವಿಚಾರವಾಗಿ ತಮಿಳುನಾಡು ಸರ್ಕಾರದ ಒಪ್ಪಿಗೆ ಪಡೆಯಲಿ’ ಎಂಬ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ, ‘ಗೋವಾದಲ್ಲಿ ಬಿಜೆಪಿ ಸರ್ಕಾರ ಇದೆಯಲ್ಲ. ಯಾಕೆ ಮಹದಾಯಿಗೆ ಅವಕಾಶ ಕೊಡುತ್ತಿಲ್ಲ’ ಎಂದು ಪ್ರಶ್ನಿಸಿದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!