ಆದಿತ್ಯ ಬನ್ನೂರು ಭಾರತೀಯ ಚಾರ್ಟರ್ಡ್ ಅಕೌಂಟಿಯೆಂಟ್ಸ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

Picture of Savistara

Savistara

Bureau Report

ಪುತ್ತೂರು, ಜುಲೈ 6, 2025:ಅದಿತ್ಯ ಆರ್. ಬನ್ನೂರು ಅವರು ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆ (ICAI) ಮೇ 2025ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯನ್ನು ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಈವರು ಪುತ್ತೂರಿನ ಹಿರಿಯ ಬಿಜೆಪಿ ಕಾರ್ಯಕರ್ತ ಹಾಗೂ ಮಾಜಿ ಪುರಸಭೆ ಅಧ್ಯಕ್ಷರಾದ ಶ್ರೀ ರಾಜೇಶ್ ಬನ್ನೂರು ಮತ್ತು ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು, ಪುತ್ತೂರಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದ ಮುಖ್ಯಸ್ಥೆ ಶ್ರೀಮತಿ ಸುಧಾ ಕುಮಾರಿ ಪಿ.ಕೆ ದಂಪತಿಗಳ ಪುತ್ರರಾಗಿದ್ದಾರೆ.ಅದಿತ್ಯ ಅವರು ತಮ್ಮ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾಭ್ಯಾಸವನ್ನು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲದಲ್ಲಿ ಪೂರ್ಣಗೊಳಿಸಿದ್ದಾರೆ. ಪಿಯುಸಿ ಶಿಕ್ಷಣವನ್ನು ವಿವೇಕಾನಂದ ಪಿಯು ಕಾಲೇಜು, ಪುತ್ತೂರಿನಲ್ಲಿ ಹಾಗೂ ಪದವಿ ಶಿಕ್ಷಣವನ್ನು ವಿವೇಕಾನಂದ ಕಾಲೇಜು ಮತ್ತು ತ್ರಿಷಾ ವಿದ್ಯಾಸಂಸ್ಥೆ, ಮಂಗಳೂರಿನಲ್ಲಿ ಮಾಡಿದ್ದಾರೆ.ಅವರು ಮಂಗಳೂರಿನ ಖ್ಯಾತ ಚಾರ್ಟರ್ಡ್ ಅಕೌಂಟೆಂಟ್ ಸಂಸ್ಥೆ ಎ. ಉಮಾನಾಥ್ ರಾವ್ ಅಂಡ್ ಕಂಪನಿಯಲ್ಲಿ ಸಿಎ ಆರ್ಟಿಕಲ್ ಶಿಪ್‌ನ್ನು ಪೂರ್ಣಗೊಳಿಸಿದ್ದಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!