ಅನ್ಯಕೋಮಿನ ಯುವಕರಿಂದ ಗಣಪತಿ ವಿಗ್ರಹ, ನಾಗರ ಕಲ್ಲಿಗೆ ಅಪಮಾನ – ಇಬ್ಬರು ಅರೆಸ್ಟ್‌

Picture of Savistara

Savistara

Bureau Report

ಶಿವಮೊಗ್ಗ: ನಗರದ (Shivamogga) ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಗಣಪತಿ ವಿಗ್ರಹ ಹಾಗೂ ನಾಗರ ಕಲ್ಲಿಗೆ ಅಪಮಾನ ಮಾಡಿದ್ದ ಕಿಡಿಗೇಡಿಗಳನ್ನು ಪೊಲೀಸರು (Police) ಬಂಧಿಸಿದ್ದಾರೆ.ಬಂಧಿತ ಅರೋಪಿಗಳನ್ನು ಸದ್ದಾಂ ಹಾಗ ರೆಹಮತ್ ಉಲ್ಲಾ ಎಂದು ಗುರುತಿಸಲಾಗಿದೆ. ಆರೋಪಿಗಳು ಬಡಾವಣೆಯ ಮುಖ್ಯರಸ್ತೆಯಲ್ಲಿ ಇತ್ತೀಚೆಗೆ ಪ್ರತಿಷ್ಠಾಪನೆ ಮಾಡಿದ್ದ ಗಣಪತಿ ವಿಗ್ರಹಕ್ಕೆ ಒದ್ದು, ನಾಗರ ಕಲ್ಲನ್ನು ಚರಂಡಿಗೆ ಎಸೆದಿದ್ದರು. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.ಕಿಡಿಗೇಡಿಗಳ ಕೃತ್ಯದಿಂದ ಕೆರಳಿದ್ದ ಹಿಂದೂ ಮುಖಂಡರು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಆಕ್ರೋಶ ಹೊರಹಾಕಿದ್ದರು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆರೋಪಿಗಳನ್ನು ಬಂಧಿಸಲಾಗಿದೆ.ಘಟನೆ ಸ್ಥಳಕ್ಕೆ ಮಾಜಿ ಡಿಸಿಎಂ ಕೆ.ಎಸ್‌ ಈಶ್ವರಪ್ಪ ಹಾಗೂ ಎಂಎಲ್‌ಸಿ ಧನಂಜಯ್‌ ಸರ್ಜಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರ ಮಾಹಿತಿ ಪಡೆದಿದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದ್ದಾರೆ.ಈ ಬಗ್ಗೆ ಪ್ರತಿಕ್ರಿಯಿಸಿರುವ ಧನಂಜಯ್‌ ಸರ್ಜಿ, ದೇವಾಲಯದ ಶುದ್ಧೀಕರಣ ಆಗಬೇಕು. ದೇವಾಲಯ ನಿರ್ಮಾಣ ಆಗಬೇಕು. ಈ ಭಾಗದ ಅಕ್ರಮ ಕಟ್ಟಡಗಳನ್ನು ನೆಲಸಮ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!