ಔಟ್ ಡೇಟೆಡ್ ವಸ್ತುವಿಗೆ ಮಾರುಕಟ್ಟೆಯಲ್ಲಿ ಬೆಲೆ ಇರಲ್ಲ. ಹೆಸರಿಟ್ಟುಕೊಂಡ ಮಾತ್ರಕ್ಕೆ ನರಿ ಸಿಂಹವಾಗಲ್ಲ: ಪ್ರತಾಪ್ ಸಿಂಹ ವಿರುದ್ಧ ಖರ್ಗೆ ವಾಗ್ದಾಳಿ

Picture of Savistara

Savistara

Bureau Report

ಪ್ರತಾಪ್ ಸಿಂಹ ಅವರೇ, ಬಿಜೆಪಿ ಪಕ್ಷ ನಿಮಗೆ ಟಿಕೆಟ್ ನೀಡದೆ ಮೂಲೆಗೆ ತಳ್ಳಿದ್ದೇಕೆ? ಸಾಮರ್ಥ್ಯವಿಲ್ಲದ್ದಕ್ಕಾ? ಟಿಕೆಟ್ ಅಷ್ಟೇ ಅಲ್ಲ, ಪಕ್ಷದಲ್ಲೂ ಯಾವುದೇ ಪ್ರಮುಖ ಹುದ್ದೆ ನೀಡದೆ ನಿರ್ಲಕ್ಷಿಸಿರುವುದೇಕೆ? ಅರ್ಹತೆ ಇಲ್ಲದ್ದಕ್ಕಾ?

ಬೆಂಗಳೂರು: ಔಟ್ ಡೇಟೆಡ್ ವಸ್ತುಗಳಿಗೆ ಮಾರುಕಟ್ಟೆಯಲ್ಲಿ ಬೆಲೆ ಇರುವುದಿಲ್ಲ. ನರಿಗಳು ಸಿಂಹ ಅಂತ ಹೆಸರಿಟ್ಟುಕೊಂಡ ಮಾತ್ರಕ್ಕೆ ಸಿಂಹ ಆಗಲು ಸಾಧ್ಯವಿಲ್ಲ ಎಂದು ಪ್ರತಾಪ್ ಸಿಂಹ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆಯವರು ಸೋಮವಾರ ವಾಗ್ದಾಳಿ ನಡೆಸಿದ್ದಾರೆ.ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಸ್ವತಃ ಬಿಜೆಪಿಯಿಂದಲೇ ತಿರಸ್ಕೃತಗೊಂಡು ಬೆಲೆ ಕಳೆದುಕೊಂಡಿರುವ ಪ್ರತಾಪ್ ಸಿಂಹ ಎಂಬ ಔಟ್ ಡೇಟೆಡ್ ವ್ಯಕ್ತಿ ನನ್ನ ಬಗ್ಗೆ ಮಾತನಾಡುವ ಮೂಲಕ ಮಾರ್ಕೆಟ್ ಕುದುರಿಸಿಕೊಳ್ಳುವ ತವಕದಲ್ಲಿದ್ದಾರೆಂದು ವ್ಯಂಗ್ಯವಾಡಿದ್ದಾರೆ.ಔಟ್ ಡೇಟೆಡ್ ವಸ್ತುಗಳಿಗೆ ಮಾರುಕಟ್ಟೆಯಲ್ಲಿ ಬೆಲೆ ಇರುವುದಿಲ್ಲ. ಸ್ವತಃ ಬಿಜೆಪಿಯಿಂದಲೇ ತಿರಸ್ಕೃತಗೊಂಡು ಬೆಲೆ ಕಳೆದುಕೊಂಡಿರುವ ಪ್ರತಾಪ್ ಸಿಂಹ ಎಂಬ ಔಟ್ ಡೇಟೆಡ್ ವ್ಯಕ್ತಿ ನನ್ನ ಬಗ್ಗೆ ಮಾತನಾಡುವ ಮೂಲಕ ಮಾರ್ಕೆಟ್ ಕುದುರಿಸಿಕೊಳ್ಳುವ ತವಕದಲ್ಲಿದ್ದಾರೆ. ವಿಜಯೇಂದ್ರ ಹಠವೋ ಬಣದಲ್ಲಿರುವ ಪ್ರತಾಪ್ ಸಿಂಹ ಮೊದಲು ತಮ್ಮ ಅಭಿಯಾನದಲ್ಲಿ ಯಶಸ್ವಿಯಾಗಿ, ತಮ್ಮ ಸಾಮರ್ಥ್ಯ ನಿರೂಪಿಸಿದ ನಂತರ ನನ್ನ ಬಗ್ಗೆ ಗಮನ ಕೊಡಲಿ ಎಂದು ತಿರುಗೇಟು ನೀಡಿದ್ದಾರೆ.ಪ್ರತಾಪ್ ಸಿಂಹ ಅವರೇ, ಬಿಜೆಪಿ ಪಕ್ಷ ನಿಮಗೆ ಟಿಕೆಟ್ ನೀಡದೆ ಮೂಲೆಗೆ ತಳ್ಳಿದ್ದೇಕೆ? ಸಾಮರ್ಥ್ಯವಿಲ್ಲದ್ದಕ್ಕಾ? ಟಿಕೆಟ್ ಅಷ್ಟೇ ಅಲ್ಲ, ಪಕ್ಷದಲ್ಲೂ ಯಾವುದೇ ಪ್ರಮುಖ ಹುದ್ದೆ ನೀಡದೆ ನಿರ್ಲಕ್ಷಿಸಿರುವುದೇಕೆ? ಅರ್ಹತೆ ಇಲ್ಲದ್ದಕ್ಕಾ? ನರಿಗಳು ಸಿಂಹ ಅಂತ ಹೆಸರಿಟ್ಟುಕೊಂಡ ಮಾತ್ರಕ್ಕೆ ಸಿಂಹ ಆಗಲು ಸಾಧ್ಯವಿಲ್ಲ. ನನ್ನ ಬಗ್ಗೆ ಮಾತನಾಡಲು ಗಂಭೀರ ವಿಷಯಗಳಿಲ್ಲದೆ ನನ್ನ ಹೆಸರಿನ ಬಗ್ಗೆ ತಲೆಕೆಡಿಸಿಕೊಳ್ಳುವ ಬದಲು ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ತಲೆಕೆಡಿಸಿಕೊಂಡರೆ ಒಳ್ಳೆಯದು ಎಂದು ಹೇಳಿದ್ದಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!