ನಾನು ಮುಖ್ಯಮಂತ್ರಿಯಾಗಲಿ ಎಂಬ ಸ್ವಾಮೀಜಿ, ಜನರ ಬಯಕೆ ತಪ್ಪಲ್ಲ:ಡಿಕೆಶಿ

Picture of Savistara

Savistara

Bureau Report

ಕನಕಪುರ: ನಾನು ಮುಖ್ಯಮಂತ್ರಿಯಾಗಲಿ ಎಂದು ಜನ ಮತ್ತುಸ್ವಾಮೀಜಿಗಳು ಬಯಸುತ್ತಾರೆ. ಅದನ್ನು ತಪ್ಪು ಎಂದು ಹೇಳಲಾಗುವುದಿಲ್ಲ. ಪಕ್ಷ ಕಟ್ಟಿರುವ ನಾವೆಲ್ಲರೂ,ಪಕ್ಷದ ಶಿಸ್ತಿನ ಸಿಪಾಯಿಗಳು. ಪಕ್ಷ ಏನು ಹೇಳುತ್ತದೊ, ಅದನ್ನ ಕೇಳಿಕೊಂಡು ಹೋಗುವವರು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಶಿವಕುಮಾ‌ರ್ ಅವರಿಗೆ ಉನ್ನತ ಸ್ಥಾನ ಸಿಗಬೇಕು ಎಂಬ ಆಶಯ ವ್ಯಕ್ತಪಡಿಸಿದ ಬಾಳೆಹೊನ್ನೂರಿನ ರಂಭಾಪುರಿ ಮಠದ ವೀರ ಸೋಮೇಶ್ವರ ಸ್ವಾಮೀಜಿ ಹೇಳಿಕೆ ಕುರಿತು ತಾಲ್ಲೂಕಿನ ಕೋಡಿಹಳ್ಳಿ ನಿವಾಸದಲ್ಲಿ ಸುದ್ದಿಗಾರರಿಗೆ ಅವರು ಪ್ರತಿಕ್ರಿಯಿಸಿದರು.ಕೆಲವರು ಚಪಲಕ್ಕೆ ಮಾತನಾಡುತ್ತಾರೆ.ಅದರ ಅವಶ್ಯಕತೆ ಇಲ್ಲ. ಮುಖ್ಯಮಂತ್ರಿ ಬದಲಾವಣೆ ವಿಚಾರ ಕುರಿತು ಯಾರೂ ಮಾತನಾಡಬಾರದು ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈಗಾಗಲೇ ಹೇಳಿದ್ದಾರೆ. ಪಕ್ಷ ಹೇಳಿದ್ದನ್ನು ಕೇಳಿಕೊಂಡು ಹೋಗುತ್ತೇವೆ. ಜನರ ಭಾವನೆಯಂತೆ ಕೆಲಸ ಮಾಡಬೇಕು ಎಂದರು.

ಒಡಂಬಡಿಕೆಯಂತೆ ಅಧಿಕಾರ ನೀಡಬೇಕು ಎಂದು ಸ್ವಾಮೀಜಿ ಒತ್ತಾಯಿಸಿದ್ದಾರಲ್ಲ ಎಂಬ ಪ್ರಶ್ನೆಗೆ, ಅದನ್ನು ಸಾರ್ವಜನಿಕವಾಗಿ ಯಾಕೆ ಮಾತನಾಡಲಿ ನಾನುಂಟು, ಪಕ್ಷ ಉಂಟು. ನಾವೆಲ್ಲ ಒಟ್ಟಿಗೆ ಕೆಲಸ ಮಾಡುತ್ತೇವೆ ಎಂದು ಪ್ರತಿಕ್ರಿಯಿಸಿದರು.ನಾನು ಮುಖ್ಯಮಂತ್ರಿಯಾಗಲಿ ಎಂದು ಜನ ಮತ್ತು ಸ್ವಾಮೀಜಿಗಳು ಬಯಸುತ್ತಾರೆ. ಅದನ್ನು ತಪ್ಪು ಎಂದು ಹೇಳಲಾಗುವುದಿಲ್ಲ: ಡಿ.ಕೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!